ಆರದ ಕಳಸಾ ಕಿಚ್ಚು…

0
498

ಗದಗ ಪ್ರತಿನಿಧಿ ವರದಿ
ಕಳಸಾ-ಬಂಡೂರಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳಿಂದ ಗದಗ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ.
 
 
ಬೇಡಿಕೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್ ನಿಂದಾಗಿ ಗದಗ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.ಬಸ್ ಗಳಿಲ್ಲದೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ.
 
 
ಗದಗದ ತರಕಾರಿ ಮಾರುಕಟ್ಟೆಗೆ ಪ್ರತಿಭಟನಾಕಾರರು ನುಗ್ಗಿ ತರಕಾರಿ ಚೆಲ್ಲಾಪಿಲ್ಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ವರ್ತನೆಯಿಂದ ವಿವಿಧ ಗ್ರಾಮಗಳಿಂದ ತರಕಾರಿ ಮಾರಲು ಬಂದಿದ್ದ  ವ್ಯಾಪಾರಿಗಳು ಕಂಗಾಲಾಗಿದ್ದಾರೆ.
 
 
ವಿವಿಧ ರೈತಪರ, ಕನ್ನಡಪರ ಸಂಘಟನೆಗಳು ಬೈಕ್ ರ್ಯಾಲಿ ನಡೆಸಿದೆ. ಗಜೇಂದ್ರಗಡ ಪಟ್ಟಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
 
ಯಥಾಸ್ಥಿತಿಗೆ ಮರಳಿದ ಕುಂದಾನಗರಿ
ಕಳಸಾ ಬಂಡೂರಿ ಹೋರಾಟ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭವಾಗಿದೆ.
ಕುಂದಾನಗರಿ ಯಥಾಸ್ಥಿತಿಗೆ ಮರಳಿದೆ. ಬೆಳಗಿನಜಾವ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಬಸ್ ಸಂಚಾರ, ಶಾಲಾ-ಕಾಲೇಜು, ವಾಹನ ಸಂಚಾರ, ವ್ಯಾಪಾರ ವಹಿವಾಟು ಆರಂಭವಾಗಿದೆ.
ಬೆಳಗಾವಿಯಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಹುಬ್ಬಳ್ಳಿಯಲ್ಲೂ ಬಂದ್ ಆಚರಣೆಯಲ್ಲಿದೆ. ರೈತ ಸಂಘಟನೆಗಳು ಇಂದು ಹುಬ್ಬಳ್ಳಿಯಲ್ಲಿ ಬಂದ್ ಗೆ ಕರೆ ನೀಡಿದೆ.
 

LEAVE A REPLY

Please enter your comment!
Please enter your name here