ರಾಜ್ಯವಾರ್ತೆ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲಾ ರೀತಿಯ ಸೌಲಭ್ಯ

 
ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರಿಗೆ ಆರೋಗ್ಯ ಸೌಲಭ್ಯ ಒದಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಗುರಿಹೊಂದಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಅವರು ತಿಳಿಸಿದರು.
 
 
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಇಂದು ಏರ್ಪಡಿಸಿದ್ದ ವಿಶ್ವ ಆರೋಗ್ಯ ದಿನ 2016 ಕಾರ್ಯಕ್ರಮವನ್ನು ಉದ್ಫಾಟಿಸಿ ಮೂರನೆ ಹಂತದ ಇಂದ್ರ ಧನುಷ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಪ್ರತಿವರ್ಷ ವಿಶ್ವ ಆರೋಗ್ಯ ದಿನದಂದು ಒಂದು ನಿರ್ದಿಷ್ಟ ಆರೋಗ್ಯ ಸಮಸ್ಯೆಯನ್ನು ಗುರುತಿಸಿ ನಿಯಂತ್ರಿಸಲು ಗಮನಹರಿಸಲಾಗುತ್ತಿದ್ದು ಈ ವರ್ಷ “ಮಧುಮೇಹದ ಏರಿಕೆಯನ್ನು ನಿಲ್ಲಿಸಿ ಮತ್ತು ಸೋಲಿಸಿ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಮಧುಮೇಹ ರೋಗ ನಿಯಂತ್ರಣಕ್ಕೆ ಇಲಾಖೆ ವತಿಯಿಂದ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
 
 
ಇಂದ್ರಧನುಷ್ ಅಭಿಯಾನದ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಇಂದು ಚಾಲನೆ ನೀಡಿದ್ದು ಪ್ರಮುಖವಾಗಿ ಆರು ಜಿಲ್ಲೆಗಳಲ್ಲಿ ಪೋಲಿಯೋ ನಿರ್ಮಾಲನೆಯ ಕಡೆಯ ತಂತ್ರವಾಗಿ ಐ.ಪಿ.ವಿ. (I.P.ಗಿ.) ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುವುದು ಎಂದ ಆರೋಗ್ಯ ಸಚಿವರು ಮಿತ ಆಹಾರ ಸೇವನೆ ಹಾಗೂ ನಿಯಮಿತ ದೈಹಿಕ ಚಟುವಟಿಕೆಗಳಿಂದ ಮಧುಮೇಹ ರೋಗವನ್ನು ನಿಯಂತ್ರಿಸಲು ಸಾಧ್ಯವಿದೆ ಎಂದರು.
 
 
ಬೆಂಗಳೂರಿನಲ್ಲಿರುವ ಮಧುಮೇಹ ಸಂಸ್ಥೆಗೆ ಸ್ವಂತ ಕಟ್ಟಡ ಹಾಗೂ ಒಳಗೋಗಿಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧ್ಯಕ್ಷತೆ ವಹಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಈ ಕಾರ್ಯಕ್ಕೆ 67 ಕೋಟಿ ರೂ. ಖರ್ಚಾಗಲಿದ್ದು, ಪ್ರಸಕ್ತ ಸಾಲಿನಲ್ಲೇ ಈ ಕೆಲಸ ಪ್ರಾರಂಭಿಸಲಾಗುವುದು ಎಂದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
 
 
ಮಧುಮೇಹ ನಿಯಂತ್ರಣಕ್ಕೆ ಕೆಳಹಂತದಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ್ ಜಿ. ಜಾದವ್ ಅವರು ತಿಳಿಸಿದರು. ಮಧುಮೇಹ ರೋಗದ ಬಗ್ಗೆ ಡಾ. ವೀರಣ್ಣ ಗೌಡ ಅವರು ಉಪನ್ಯಾಸ ನೀಡಿದರು.
 
 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ರಾಷ್ಟ್ರೀಯ ಅರೋಗ್ಯ ಅಭಿಯಾನ ನಿರ್ದೇಶಕಿ ಶ್ರೀಮತಿ ಸೌಜನ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ. ವಿಮಲಾ ಆರ್. ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here