ಆರೋಗ್ಯ ಇಲಾಖೆಯಿಂದ ಸುತ್ತೋಲೆ

0
285

ಬೆಂಗಳೂರು ಪ್ರತಿನಿಧಿ ವರದಿ
500, 1000ರೂ. ನೋಟುಗಳ ಚಲಾವಣೆ ರದ್ದು ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲಿ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
 
 
 
ಸಾರ್ವಜನಿಕರ ಹಿತದೃಷ್ಠಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ನೀಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೋಗಿಗಳಿಗೂ ಚಿಕಿತ್ಸಾ ಸೌಲಭ್ಯ ನೀಡುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಆದೇಶಿಸಿದ್ಧಾರೆ.
 
 
 
ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದರೆ ನೆರವು ದೊರಕುತ್ತದೆ. ನೆರವಿಗಾಗಿ ಇಲಾಖೆ ಸಹಾಯವಾಡಿ 104ಗೆ ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ. ಸಹಾಯವಾಣಿ ಮೂಲಕ ರೋಗಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗುತ್ತದೆ. ಹಾಗೂ 108ಗೆ ಸಂಪರ್ಕಿಸಿದರೆ ಸೂಕ್ತ ಚಿಕಿತ್ಸೆ ನೀಡುವ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.
 
 
ಇದರಿಂದ ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಯಾವುದೇ ಸಂದರ್ಭದಲ್ಲಿಯೂ ಚಿಕಿತ್ಸೆ ತಿರಸ್ಕರಿಸುವಂತಿಲ್ಲ. ದಿನದ 24 ಗಂಟೆಗಳು ಆರೋಗ್ಯ ಇಲಾಖೆ ಸೇವೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

LEAVE A REPLY

Please enter your comment!
Please enter your name here