ಆರೋಗ್ಯ ತಪಾಸನಾ ಶಿಬಿರ

0
424

ಮ0ಗಳೂರು ಪ್ರತಿನಿಧಿ ವರದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ ಗಳ ಸಹಯೋಗದೊಂದಿಗೆ ಜೂನ್ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಬಂಟ್ವಾಳ ತಾಲೂಕಿನ ವಿಟ್ಲ ಮತ್ತು ಜೂನ್ 18 ರಂದು ಪುತ್ತೂರು ತಾಲೂಕಿನ ಪಾಣಾಜೆ ಮತ್ತು ಜೂನ್ 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಸುಳ್ಯ ತಾಲೂಕಿನ ಬೆಳ್ಳಾರೆ, ಮಂಗಳೂರು ತಾಲೂಕಿನ ಶಿರ್ತಾಡಿ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here