ಆರ್ ಎಸ್ ಎಸ್ ಕಚೇರಿ ಮೇಲೆ ದಾಳಿ

0
308

ರಾಷ್ಟ್ರೀಯ ಪ್ರತಿನಿಧಿ ವರದಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ಕೇರಳದ ನಡಪುರಂ ಜಿಲ್ಲೆಯಲ್ಲಿ ನಡೆದಿದೆ.
 
 
ಘಟನೆಯಲ್ಲಿ ಬಾಬೂ, ವಿನೀಶ್. ಸುಧೀರ್ ಮತ್ತು ಸುನಿಲ್ ಎಂಬುವವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಬಾಬು ಮತ್ತು ವಿನೀಶ್ ಅವರ ಹೊಟ್ಟೆ, ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಕೋಝಿಕ್ಕೋಡ್ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತಿಬ್ಬರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 
 
ದಾಳಿ ಹಿಂದಿರುವ ಪ್ರಮುಖ ಕಾರಣಗಳು ಈ ವರೆಗೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here