ಆಸ್ಟ್ರೇಲಿಯಾ : ಮಾರ್ಚ್ ನಲ್ಲಿ 13ನೇ ವಿಶ್ವ ಕನ್ನಡ ಸಮ್ಮೇಳನ

0
336

 
ಬೆಂಗಳೂರು ಪ್ರತಿನಿಧಿ ವರದಿ
ಪ್ರಥಮ ಭಾರಿಗೆ ಆಸ್ಟ್ರೇಲಿಯಾದಲ್ಲಿ ವಿಶ್ವ ಕನ್ನಡ ಸಮ್ಮೇಳನವೊಂದು ಜರುಗಲಿದೆ ಎಂದು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿಯ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ತಿಳಿಸಿದ್ದಾರೆ.
 
 
 
ಶನಿವಾರ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಶ್ವ ಕನ್ನಡ ಸಮ್ಮೇಳನದ ಬಗ್ಗೆ ಮಾತನಾಡಿದ ಅವರು, ಸಮ್ಮೇಳನದ ಪೂರ್ವಬಾವಿ ತಯಾರಿಗೆ ಆಸ್ಟ್ರೇಲಿಯಾ ಯುನೈಟೆಡ್ ಕನ್ನಡ ಸಂಘವು ಸಕಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ  ಹಾಗೂ ಕರ್ನಾಟಕದಿಂದ 70 ಕ್ಕೂ ಹೆಚ್ಚು ಸಾಂಸ್ಕೃತಿಕ ನಿಯೋಗ ಆಸ್ಟ್ರೇಲಿಯಾಗೆ ಪ್ರಯಾಣಿಸಲಿದೆ ಎಂದರು.
 
 
ಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಕಡಬಂ ರಮೇಶ್ ಮಾತನಾಡಿ, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವು ವಿಶ್ವದ ಹಲವು ದೇಶಗಳಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿಕೊಂಡು ಬರುತ್ತಿದೆ. ಅಂತೆಯೇ ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಶ್ರಮಿಸುತ್ತಿದ್ದೇವೆ ಎಂದು ತಿಳಸಿದರು. ಪತ್ರಿಕಾಗೋಷ್ಟಿಯಲ್ಲಿ ಸಲಹಾ ಸಮಿತಿ ನಿರ್ದೇಶಕರಾದ ಯಾಕೂಬ್ ಖಾದರ್ ಗುಲ್ವಾಡಿ ಮತ್ತು ಗೋ.ನ.ಸ್ವಾಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here