ಆಸ್ಪತ್ರೆ ದಾಖಲಾದ ಪಾಸ್ವಾನ್

0
275

ರಾಷ್ಟ್ರೀಯ ಪ್ರತಿನಿಧಿ ವರದಿ
ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ ಧುರೀಣ ರಾಮ್ ವಿಲಾಸ್ ಪಾಸ್ವಾನ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಸಂಜೆ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಅವರ ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
 
 
 
ಎದೆನೋವು ಎಂದ ಪಾಸ್ವಾನ್ ಅವರನ್ನು ಕೂಡಲೇ ರಾಜಾಬಜಾರ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಪರಿಸ್ಥಿತಿಯನ್ವಯ ಅವರನ್ನು ಐಸಿಯುಗೆ ಸೇರಿಸಲಾಗಿದೆ.
ವೈದ್ಯರು ಇನ್ನೂ ತಪಾಸಣೆ, ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ಪಾಸ್ವಾನ್ ಅವರ ಅನಾರೋಗ್ಯ ಹಾಗೂ ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

LEAVE A REPLY

Please enter your comment!
Please enter your name here