ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

0
284

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ನಾಯಕ ವಿರಾಟ್ ಹಾಗೂ ಕೇದಾರ್ ಜಾಧವ್ ಅವರ ಭರ್ಜರಿ ಶತಕದ ನೆರವಿನಿಂದ 3 ವಿಕೆಟ್ ಗಳ ವಿಜಯ ಸಾಧಿಸಿದೆ.
 
 
 
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಇಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ್ದ 351 ರನ್ ಗಳ ಗುರಿಯನ್ನು ಬೆನ್ನುಹತ್ತಿದ ಭಾರತ ತಂಡ ನಾಯಕ ವಿರಾಟ್ ಕೊಹ್ಲಿ ಹಾಗೂ ಕೇದಾರ್ ಜಾಧವ್ ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಜಯಿಸಿದೆ.
 
 
ಟೀಂ ಇಂಡಿಯಾದ ‘ರನ್ ಮಷಿನ್’ ವಿರಾಟ್ ಕೊಹ್ಲಿ ಅವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಯಶಸ್ವಿ ರನ್ ಚೇಸ್ ಶತಕಗಳ ದಾಖಲೆಯನ್ನು ಮುರಿದಿದ್ದಾರೆ.

LEAVE A REPLY

Please enter your comment!
Please enter your name here