ಇಂದಿನಿಂದಲೇ ಮೌಲ್ಯಮಾಪನಕ್ಕೆ ಹಾಜರ್

0
388

ಬೆಂಗಳೂರು ಪ್ರತಿನಿಧಿ ವರದಿ
ಪಿಯು ಉಪನ್ಯಾಸಕರ ಪ್ರತಿಭಟನೆ ಇಂದಿಗೆ ಅಂತ್ಯವಾಗಿದೆ. ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಿ ಶಿಕ್ಷಕರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ 18 ದಿನಗಳ ಉಪನ್ಯಾಸಕರ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.
 
 
 
ಪ್ರತಿಭಟನೆ ಕೈಬಿಟ್ಟ ಹಿನ್ನೆಲೆಯಲ್ಲಿ ಉಪನ್ಯಾಸಕರು ಇಂದಿನಿಂದಲೇ ಮೌಲ್ಯಮಾಪನಕ್ಕೆ ಹಾಜರಾಗಲಿದ್ದಾರೆ. ಈಗಾಗಲೇ ಉಪನ್ಯಾಸಕರು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಭೇಟಿ ಮಾಡಿ, ಪ್ರತಿಭಟನೆಯನ್ನು ಮಂಗಳವಾರ ರಾತ್ರಿ ವಾಪಸ್ ಪಡೆದುಕೊಂಡಿದ್ದಾರೆ.
 
 
 
ವಿದ್ಯಾರ್ಥಿಗಳ ಹಿತದೃಷ್ಠಿಯಿಂದಾಗಿ ಉಪನ್ಯಾಸಕರು ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಸರ್ಕಾರ ಘೋಷಿಸಿದ್ದ 1 ಇನ್ ಕ್ರಿಮೆಂಟ್ ನ್ನು ಸರ್ಕಾರಕ್ಕೆ ವಾಪಸ್ ಮಾಡಲಾಗಿದೆ. ಸರ್ಕಾರ ನೀಡುವ ಭಿಕ್ಷೆ ರೂಪದ ಹಣ ನಮಗೆ ಬೇಡ. ಸರ್ಕಾರಕ್ಕೆ ಅವರ ಭಿಕ್ಷೆಯನ್ನು ವಾಪಸ್ ನೀಡುತ್ತೇವೆ ಎಂದು ಪಿ ಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here