ಇಂದಿನಿಂದ ಪಿಯುಸಿ ವಾರ್ಷಿಕ ಪರೀಕ್ಷೆ ಶುರು

0
225

ಬೆಂಗಳೂರು ಪ್ರತಿನಿಧಿ ವರದಿ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ ಆರಂಭವಾಗಿದೆ.ಇಂದು ಬೆಳಗ್ಗೆ 10.15ಕ್ಕೆ ಆರಂಭವಾಗಿದ್ದು, ಮಧ್ಯಾಹ್ನ 1.30 ವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದಿನಿಂದ ಮಾರ್ಚ್ 27ರವರೆಗೆ ಪರೀಕ್ಷೆ ನಡೆಯಲಿದೆ.
 
 
ಇಂದು ಜೀವಶಾಸ್ತ್ರ ಹಾಗೂ ಇತಿಹಾಸ ವಿಷಯದ ಪರೀಕ್ಷೆಗಳು ನಡೆಯಲಿವೆ. ಈ ವರ್ಷ 6 ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 3 ಲಕ್ಷದ 48 ಸಾವಿರದ 562 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 35 ಸಾವಿರದ 909 ವಿದ್ಯಾರ್ಥಿನಿಯರು ಒಳಗೊಂಡಿದ್ದಾರೆ. 19 ಜನ ತೃತೀಯ ಲಿಂಗಿಗಳು ಪರೀಕ್ಷೆ ಬರೆಯುತ್ತಿರುವುದು ಈ ಬಾರಿಯ ವಿಶೇಷ. ರಾಜ್ಯಾದ್ಯಂತ 998 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

LEAVE A REPLY

Please enter your comment!
Please enter your name here