ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

0
192

ವರದಿ: ಲೇಖಾ
ಸಂಸತ್ ಮುಂಗಾರು ಅಧಿವೇಶನ ಜು.18 ರಿಂದ ಪ್ರಾರಂಭವಾಗಲಿದ್ದು, ಈ ನಿಟ್ಟಿನಲ್ಲಿ ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷ ಸಭೆ ಕರೆದಿದ್ದಾರೆ.
 
 
ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರ, ಎನ್ ಎಸ್ ಜಿ ಸದಸ್ಯತ್ವ ಪಡೆಯುವಲ್ಲಿ ಕೇಂದ್ರದ ವೈಫಲ್ಯ, ಕೆಲವು ರಾಜ್ಯಗಳಲ್ಲಿನ ಪ್ರವಾಹದ ಬಗ್ಗೆ, ಕೃಷಿ ಸಮಸ್ಯೆಗಳು ಮತ್ತು ಭಯೋತ್ಪಾದನೆ, ಅರುಣಾಚಲ ಪ್ರದೇಶ, ಉತ್ತರಾಖಂಡ ವಿವಾದ ಮುಂತಾದ ವಿಚಾರಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
 
 
ಪ್ರಸಕ್ತ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಜಿಎಸ್ ಟಿ ಮಸೂದೆ ಅಂಗೀಕರಿಸಲು ಉದ್ದೇಶಿಸಿದ್ದು, ಈ ಬಗ್ಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷ ಸಭೆಯಲ್ಲಿ ಮಾತನಾಡಲಿದ್ದಾರೆ. ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ವಿಪಕ್ಷಗಳ ಸಹಕಾರ ಅಗತ್ಯವಾಗಿರುವುದರಿಂದ ವಿತ್ತ ಸಚಿವ ಅರುಣ್ ಜೇಟ್ಲಿ, ರಾಜ್ಯಸಭೆ ವಿಪಕ್ಷ ನಾಯಕ ಗುಲಾಂ ನಬಿ ಅಜಾದ್, ಆನಂದ್ ಶರ್ಮಾ ಅವರೊಂದಿಗೆ ಈಗಾಗಲೇ ಸಭೆ ನಡೆಸಿದ್ದಾರೆ.
 
 
ಕೇಂದ್ರ ಸರ್ಕಾರ ಸಹ ಜಿಎಸ್ ಟಿ ಮಸೂದೆಯಲ್ಲಿ ಕಾಂಗ್ರೆಸ್ ಮುಂದಿಟ್ಟಿರುವ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದೆ ಎಂದು ಹೇಳಲಾಗಿದ್ದು, ಜಿಎಸ್ ಟಿ ಮಸೂದೆ ಪ್ರಸಕ್ತ ಅಧಿವೇಶನದಲ್ಲಿ ಅಂಗೀಕಾರ ಪಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಜಿಎಸ್ ಟಿ ಮಸೂದೆ ಅಂಗೀಕಾರ ಹಿನ್ನಲೆಯಲ್ಲಿ ಈ ಬಾರಿಯ ಸಂಸತ್ ಅಧಿವೇಶನ ಮಹತ್ವ ಪಡೆದುಕೊಂಡಿದೆ.
 
 
ಒಟ್ಟು 20 ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಅಗಸ್ಟ್‌ 15 ರಂದ ಅಧಿವೇಶನ ಮುಕ್ತಾಯಗೊಳ್ಳುತ್ತದೆ.

LEAVE A REPLY

Please enter your comment!
Please enter your name here