ಇಂದು ಅರ್ಜಿ ವಿಚಾರಣೆ

0
166

ರಾಷ್ಟ್ರೀಯ ಪ್ರತಿನಿಧಿ ವರದಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದ ಹಿನ್ನೆಲೆಯಲ್ಲಿ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಕೋರ್ಟ್ ನಲ್ಲಿಂದು ಒಟ್ಟು 7 ಅರ್ಜಿಗಳ ವಿಚಾರಣೆ ನಡೆಯಲಿದೆ. ಸುಪ್ರೀಂಕೋರ್ಟ್ ನ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ನ್ಯಾ.ದೀಪಕ್ ಮಿಶ್ರಾ, ನ್ಯಾ.ಉದಯ್ ಲಲಿತ್ ಪೀಠ ವಿಚಾರಣೆ ನಡೆಸಲಿದೆ.
 
 
 
ಸೆ.20ರ ಆದೇಶ ಮಾರ್ಪಾಡಿಗೆ ಕರ್ನಾಟಕ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿತ್ತು. ಇಂದು ಕೋರ್ಟ್ ನಲ್ಲಿ ಅದೇ ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಸದ್ಯ ನೀರು ಹರಿಸಲು ಅಸಾಧ್ಯವೆಂದು ಹೇಳಿದೆ. ಇದಕ್ಕೆ ಪ್ರತಿಯಾಗಿ ತಮಿಳುನಾಡಿನಿಂದ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ಮೇಲುಸ್ತುವಾರಿ ಸಮಿತಿ ಆದೇಶವನ್ನು ಪ್ರಶ್ನಿಸಿ ಎರಡು ಅರ್ಜಿ ಸಲ್ಲಿಸಿದೆ. ಕುಡಿಯುವ ನೀರು ರಕ್ಷಣೆಗೆ ಬಿ-ಪ್ಯಾಕ್ ಅರ್ಜಿ ಸಲ್ಲಿಕೆಯಾಗಿದೆ. ಅಲ್ಲದೆ ಕಾವೇರಿ ಗಲಭೆ ಕುರಿತ ಅರ್ಜಿಯ ವಿಚಾರಣೆಯೂ ನಡೆಯಲಿದೆ. ಹೀಗೆ ಸುಪ್ರೀಂಕೋರ್ಟ್ ನಲ್ಲಿ ಉಭಯ ರಾಜ್ಯಗಳ ಅರ್ಜಿ ವಿಚಾರಣೆ ನಡೆಯಲಿದೆ.

LEAVE A REPLY

Please enter your comment!
Please enter your name here