ಇಂದು ಕೊನೆಯ ದಿನ

0
277

ರಾಷ್ಟ್ರೀಯ ಪ್ರತಿನಿಧಿ ವರದಿ
ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವ 500 ಮತ್ತು 1000 ರೂ.ಮುಖಬೆಲೆಯ ಹಳೆಯ ನೋಟುಗಳನ್ನು ಸರ್ಕಾರಿ ಕಚೇರಿಗಳಲ್ಲಿ ಚಲಾವಣೆ ಮಾಡುವ ಅವಧಿ ಬುಧವಾರಕ್ಕೆ ಅಂತ್ಯಗೊಳ್ಳಲಿದೆ.
 
 
 
ನಾಳೆಯಿಂದ ಸರ್ಕಾರಿ ಕಚೇರಿಗಳಲ್ಲೂ ಹಳೆಯನೋಟುಗನ್ನು ಸ್ವೀಕರಿಸದಿರಲು ನಿರ್ಧರಿಸಲಾಗಿದೆ. ಆದರೆ ಬ್ಯಾಕ್ ಗಳಲ್ಲಿ ಹಳೆಯ ನೋಟುಗಳನ್ನು ಠೇವಣಿ ಮಾಡುವ ಅವಧಿಯನ್ನು ಡಿಸೆಂಬರ್ 30ರವರೆಗೂ ವಿಸ್ತರಿಸಲಾಗಿದೆ.
 
 
ಈ ಹಿಂದೆ ಕೇಂದ್ರ ಸರ್ಕಾರ ಸರ್ಕಾರ ಕಚೇರಿಗಳಾದ ಅಂಚೆಕಚೇರಿ, ಸರ್ಕಾರಿ ಆಸ್ಪತ್ರೆ, ಹಾಲಿನ ಕೇಂದ್ರ, ರೈಲ್ವೇ ಟಿಕೆಟ್ ಬುಕ್ಕಿಂಗ್, ಶವಾಗಾರಗಳು, ಹೆದ್ದಾರಿ ಟೋಲ್ ಕೇಂದ್ರ ಸೇರಿದಂತೆ ಇತರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕೇಂದ್ರಗಳಲ್ಲಿ ಹಳೆಯ ನೋಟುಗಳ ಚಲಾವಣೆಗೆ ಅನುವು ಮಾಡಿಕೊಟ್ಟಿತ್ತು. ನೀರಿನ ಬಿಲ್ ಪಾವತಿ, ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಇತರೆ ಬಿಲ್ ಗಳನ್ನು ಸರ್ಕಾರಿ ಕಚೇರಿಗಳಲ್ಲಿ ಪಾವತಿ ಮಾಡಲು ಅನುವು ಮಾಡಿಕೊಡಲಾಗಿತ್ತು. ಆದರೆ ಈ ಕಾಲಾವಧಿ ಇಂದಿಗೆ ಅಂತ್ಯವಾಗುತ್ತಿದ್ದು, ನಾಳೆಯಿಂದ ಎಲ್ಲ ಸರ್ಕಾರ ಕಚೇರಿಗಳಲ್ಲಿ ಹಳೆಯ ನೋಟು ಚಲಾವಣೆಯಾಗುವುದಿಲ್ಲ.

LEAVE A REPLY

Please enter your comment!
Please enter your name here