ಇಂದು ನೂತನ ಸಂಸದರ ಪ್ರಮಾಣ ವಚನ

0
467

 
ನವದೆಹಲಿ ಪ್ರತಿನಿಧಿ ವರದಿ
ಕೇಂದ್ರ ಸಚಿವ ಸಂಪುಟ ಇಂದು ಪುನಾರಚನೆಯಾಗಲಿದೆ. ಇದದರಿಂದ ಇಂದು 19 ಸಂಸದರು ಮೋದಿ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿರುವ ಮೆಜೆಸ್ಟಿಕ್ ದರ್ಬಾರ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.
 
 
ಮೋದಿ ಸಂಪುಟಕ್ಕೆ ಸೇರ್ಪಡೆಯಾಗುವ ಸಂಸದರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ.
 
 
ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ. ಉತ್ತರಪ್ರದೇಶ, ಗುಜರಾತ್, ಪಂಜಾಬ್, ರಾಜಸ್ಥಾನ, ಮಹಾರಾಷ್ಟ್ರದ ಸಂಸದರಿಗೆ ಆದ್ಯತೆ ನೀಡಲಿದ್ದಾರೆ.
 
 
ಕರ್ನಾಟಕದಿಂದ ಕೇಂದ್ರ ಬೃಹತ್ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಖಾತೆ  ಸಚಿವರಾಗಿರುವ ದಾವಣಗೆರೆಯ ಜಿ.ಎಂ. ಸಿದ್ದೇಶ್ವರ್‌ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದ್ದು, ಇವರ ಬದಲು ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿಯವರಿಗೆ ಸಚಿವಸ್ಥಾನ ಲಭಿಸುವ ಸಾಧ್ಯತೆ ಇದೆ .

LEAVE A REPLY

Please enter your comment!
Please enter your name here