ಇಂದು ಪತ್ರಿಕಾ ದಿನಾಚರಣೆ

0
668

 
ವಿಶೇಷ ಲೇಖನ
ಇಂದು ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯಾಗಿ ಆಚರಿಸುತ್ತಾರೆ. ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ ಪ್ರಾರಂಭವಾದದ್ದು 1843ರ ಜುಲೈ 1ರಂದು ಹಾಗಾಗಿ ಇಂದಿನ ದಿನವನ್ನು ಪತ್ರಿಕಾ ದಿನಾಚರಣೆಯಾಗಿ ಆಚರಿಸುತ್ತಾರೆ.
 
 
ಮಂಗಳೂರಿನಲ್ಲಿ ಕನ್ನಡ ಪತ್ರಿಕೋದ್ಯಮದ ಪ್ರಾರಂಭ ಬಾಸೆಲ್ ಮಿಶನ್ ಸಂಸ್ಥೆಯಿಂದ ನಡೆಯಿತು. ಮಂಗಳೂರು ಸಮಾಚಾರ ಕನ್ನಡದ ಮೊದಲ ಪತ್ರಿಕೆಯಾಗಿದ್ದು, ಇದರ ಸಂಪಾದಕ ಹೆರ್ಮನ್ ಮ್ಯೋಗ್ಲಿಂಗ್ 172 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಕನ್ನಡ ಪತ್ರಿಕೋದ್ಯಮ ಪ್ರಾರಂಭವಾದದ್ದು ತುಳುನಾಡಿನ ಮಂಗಳೂರಿನಲ್ಲಿ ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರವಾಗಿದೆ.
 
 
 
‘ಮಂಗಳೂರು ಸಮಾಚಾರ’ ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ. ಪಾಶ್ಚಾತ್ಯ ಪ್ರಪಂಚದಲ್ಲಿ ಜನಜೀವನದ ಮೇಲೆ ಮುದ್ರಣದ ಪ್ರಬಾವವು ಮೂರು ನಾಲ್ಕು ಶತಮಾನಗಳಿಂದ ಉಂಟಾಗಿದ್ದರೂ ನಮ್ಮಲ್ಲಿ ಈ ವ್ಯವಸ್ಥೆ ಒಂದೂವರೆ ಶತಮಾನದ ಈಚಿನದು. ಈ ಸೌಲಭ್ಯವನ್ನು ಒದಗಿಸಿಕೊಟ್ಟವರು ಪಾಶ್ಚಾತ್ಯರು. ಕ್ರೈಸ್ತ ಮತ ಪ್ರಚಾರಕ್ಕಾಗಿ ಬಂದ ಇವರು ಮೊದಲು ಇಲ್ಲಿ ಕಲ್ಲಚ್ಚಿನ ಮುದ್ರಣವನ್ನು ಬೆಳಕಿಗೆ ತಂದರು. ತದನಂತರ ಅಚ್ಚುಮೊಳೆಗಳ ಮುದ್ರಣವೂ ಆರಂಭವಾಯಿತು.

LEAVE A REPLY

Please enter your comment!
Please enter your name here