ಇಂದು ಪದಗ್ರಹಣ

0
358

 
ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದು ಪಶ್ಚಿಮಬಂಗಾಳ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೋಲ್ಕತ್ತಾದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ.
 
 
ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಸತತ 2ನೇ ಬಾರಿಗೆ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಮಮತಾ ಜತೆ 44 ಸಚಿವರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
 
 
 
ಪ್ರಮಾಣವಚನದ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೇಶ್, ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಭೂತಾನ್ ದೇಶದ ಪ್ರಧಾನಮಂತ್ರಿ ಶೆರಿಂಗ್ ಟಾಬ್ಗೇ ಸೇರದಂತೆ ಪ್ರಮುಖ ರಾಜಕೀಯ ನಾಯಕರುಗಳು ಭಾಗಿಯಾಗಲಿದ್ದಾರೆ.
 
 
 
ಮೇ 19ರಂದು ಪ್ರಕಟಗೊಂಡಿದ್ದ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಟಿಎಂಸಿ ಪಕ್ಷ 294 ಸ್ಥಾನಗಳ ಪೈಕಿ 211 ಸ್ಥಾನ ಗೆದ್ದಿದೆ.

LEAVE A REPLY

Please enter your comment!
Please enter your name here