ಇಂದು ಮಕ್ಕಳ ದಿನಾಚರಣೆ

0
715

ವಿಶೇಷ ಲೇಖನ
ಇಂದು ನವೆಂಬರ್ 14 ವಿಶ್ವದಾದ್ಯಂತ ಮಕ್ಕಳ ದಿನಾಚರಣೆಯನ್ನು ಶಾಲೆಗಳಲ್ಲಿ ಸಂಭ‍್ರಮದಿಂದ ಆಚರಿಸುತ್ತಾರೆ. ನ.14ರಂದು ಭಾರತದಲ್ಲಿ ಜವಾಹರ್‌ಲಾಲ್ ನೆಹರುರವರ ಹುಟ್ಟುಹಬ್ಬದಂದು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.
 
 
ಹಿನ್ನೆಲೆ
ಜವಹಾರ್ ಲಾಲ್ ನೆಹೆರುವರಿಗೆ ಮಕ್ಕಳೆಂದರೆ ಬಹಳ ಇಷ್ಟ.ಅವರು ಅನಾಥ ಮಕ್ಕಳು ಕೊಟ್ಟ ಗುಲಾಬಿಯನ್ನು ತಮ್ಮ ಕೋಟಿನ ಜೇಬಿಗೆ ಅಂಟಿಸಿ ಸಂತೋಷ ಪಡುತ್ತಿದ್ದರಂತೆ. ಮಕ್ಕಳ ಮೇಲಿದ್ದ ಇವರ ಅಕ್ಕರೆ, ಪ್ರೀತಿಯ ಸಂಕೇತವಾಗಿ ದೇಶದಾದ್ಯಂತ ಈ ದಿನದಂದು ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಇವರು ಪ್ರಧಾನಿಯಾಗಿದ್ದ ಸಮಯದಲ್ಲಿ ಮಕ್ಕಳ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದರಂತೆ. ಇಂದಿನ ಮಕ್ಕಳೇ ಮುಂದಿನ ಜನಾಂಗ ಎಂದಿದ್ದಾರೆ.
 
 
ಆಚರಣೆ
ಸಾಧಾರಣವಾಗಿ ಶಾಲೆಗಳಲ್ಲಿ ಮಕ್ಕಳು ಹಾಡು, ಆಟಗಳನ್ನು ಕೂಡಿದ ಕೆಲವು ಘಂಟೆಗಳ ಬಳಿಕ ರಜೆ ಘೋಷಿಸಲಾಗುತ್ತದೆ. ಮಕ್ಕಳ ದಿನಾಚರಣೆಯಂದು ವಿವಿಧೆಡೆ ಕಲಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಚಿತ್ರಕಲೆ ಸ್ಪರ್ಧೆಗಳು ಪ್ರಮುಖವಾಗಿರುತ್ತದೆ.
 
 
ಮಕ್ಕಳ ಚಾಚಾ:
ಜವಾಹರರಿಗೆ ಮೊದಲಿನಿಂದಲೂ ಮಕ್ಕಳೆಂದರೆ ಬಹಳ ಪ್ರೀತಿ.ಮಕ್ಕಳೊಡನೆ ಆಟವಾಡುವುದೆಂದರೆ ಆನಂದ. ಸ್ವತಂತ್ರ ಭಾರತದ ಪ್ರಧಾನಮಂತ್ರಿಯಾಗಿ ದಿನವಿಡೀ ದುಡಿತ ವಿದ್ದಾಗಲೂ ಅವರು ಮಕ್ಕಳೊಡನೆ ಆಡುವ ಪ್ರಸಂಗ ತಪ್ಪಿಸುತ್ತಿರಲಿಲ್ಲ. ಯಾವುದೇ ಸಭೆಗೆ ಹೋಗಿರಲಿ, ಎಷ್ಟೇ ಅವಸರದ ಕಾರ್ಯಕ್ರಮವಿರಲಿ ಅವರು ಮಕ್ಕಳನ್ನು ನೋಡಿದ ಕೂಡಲೆ ಎತ್ತಿ ಮುದ್ದಾಡುತ್ತಿದ್ದರು. ‘‘ನಿಜವಾದ ಜವಾಹರರನ್ನು ನೋಡಬೇಕಾದರೆ ಅವರು ಮಕ್ಕಳೊಂದಿಗೆ ಇರುವಾಗ ನೋಡಬೇಕು. ಮಕ್ಕಳಂತೆಯೇ ಮಾತನಾಡಿ, ಅವರ ಹಾಗೆಯೇ ಆಟವಾಡಿ ನಲಿದು ಆನಂದಪಡುತ್ತಾರೆ’’ ಎಂದು ಅವರ ತಂಗಿ ಶ್ರೀಮತಿ ವಿಜಯಲಕ್ಷ್ಮಿ ಪಂಡಿತರು ಹೇಳಿದ್ದಾರೆ. ನವೆಂಬರ್ 14 ನಮ್ಮ ದೇಶದ ಒಬ್ಬ ಮಹಾಪುರುಷರಾದ ಪಂಡಿತ ಜವಾಹರ್‌ಲಾಲ್ ನೆಹರು ಅವರ ಜನ್ಮದಿನ. ಅಂದು ಭಾರತದಲ್ಲೆಲ್ಲ ‘ಮಕ್ಕಳ ದಿನ’ ಎಂದು ಸಂಭ್ರಮದಿಂದ ಪ್ರತಿವರುಷ ಆಚರಿಸುತ್ತೇವೆ. ಜವಾಹರರನ್ನು ಮಕ್ಕಳು ‘ಚಾಚಾ ನೆಹರೂ’ ಎಂದು ಪ್ರೀತಿ-ಗೌರವಗಳಿಂದ ಕರೆಯುತ್ತಾರೆ. ಚಾಚಾ ಎಂದರೆ ಚಿಕ್ಕಪ್ಪ.

LEAVE A REPLY

Please enter your comment!
Please enter your name here