ಇಂದು ಸಂಜೆ ಅಂತ್ಯಕ್ರಿಯೆ

0
234

 
ಬೆಂಗಳೂರು ಪ್ರತಿನಿಧಿ ವರದಿ
ಇಂದು ಸಿಎಂ ಸಿದ್ದರಾಮಯ್ಯ ಅವರ ಮಗ ರಾಕೇಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಟಿ.ಕಾಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಮೃತದೇಹ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.
 
 
ಕಂಪೇಗೌಡ ಏರ್ ಪೋರ್ಟ್ ಬಳಿ ಬಿಗಿ ಭದ್ರತೆ ಮಾಡಲಾಗಿದೆ. ಪಾರ್ಥಿವ ಶರೀರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಜಮೀರ್ ಅಗಮದ್ ಖಾನ್ ಬರಮಾಡಿಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಚೆಲುರಾಯಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ ಸಾಥ್ ನೀಡಿದ್ದಾರೆ.
 
 
ಇಲ್ಲಿ ರಾಕೇಶ್ ಪಾರ್ಥಿವ ಶರೀರವನ್ನು ನೇರವಾಗಿ ಮೈಸೂರಿಗೆ ಕೊಂಡಯ್ಯಲಾಗುತ್ತಿದೆ. ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಬೆಲ್ಜಿಯಂ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್(39) ಕಳೆದ ಒಂದು ವಾರದಿಂದ ಬೆಲ್ಜಿಯಂನ ಬ್ರಷಲ್ಸ್ ನ ಆಂಟ್ ವರ್ಪ್ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಕೇಶ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇವರು ಪ್ಯಾಂಕ್ರಿಯಾಸ್ ತೊಂದರೆಯಿಂದ ಬಳಲುತ್ತಿದ್ದರು.

LEAVE A REPLY

Please enter your comment!
Please enter your name here