ಇಂದ್ರಪಾಡದಲ್ಲಿ ಏಕಾಏಕಿ ಕಂಪಿಸಿದ ಭೂಮಿ

0
350

ಕಲಬುರಗಿ ಪ್ರತಿನಿಧಿ ವರದಿ
ಇಂದ್ರಪಾಡ ಹೊಸಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಭೂಕಂಪನ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಇಂದ್ರಪಾಡದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
 
 
ಇಲ್ಲಿನ ಭೂಮಿ ಕಂಪಿಸಿರುವ ಬಗ್ಗೆ ಅಧಿಕಾರಿಗಳು ಅಧಿಕೃತವಾದ ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 1.6ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಭೂಮಿಯಿಂದ ವಿಚಿತ್ರವಾದ ಸದ್ದು ಬರುತ್ತಿದೆ. ಈಗ ನಿನ್ನೆ ರಾತ್ರಿ ಏಕಾಏಕಿ ಗ್ರಾಮದಲ್ಲಿ ಭೂಮಿ ಕಂಪಿಸಿದೆ.

LEAVE A REPLY

Please enter your comment!
Please enter your name here