ರಾಷ್ಟ್ರೀಯ ಪ್ರತಿನಿಧಿ ವರದಿ
ಮಣಿಪುರ ರಾಜಧಾನಿ ಇಂಫಾಲದಲ್ಲಿ ಮತ್ತೆ ಬಾಂಬ್ ಸ್ಫೋಟವಾಗಿದೆ. ಮಣಿಪುರ ವಿಶ್ವವಿದ್ಯಾಲಯದ ಮುಖ್ಯ ಗೇಟ್ ಬಳಿ ಈ ಘಟನೆ ಸಂಭವಿಸಿದೆ.
ಬುಧವಾರ ಬೆಳಗ್ಗೆ ಬಿಎಸ್ ಎಫ್ ಕ್ಯಾಂಪ್ ಬಳಿ ಬಾಂಬ್ ಸ್ಫೋಟವಾಗಿತ್ತು. ಸ್ಫೋಟದಲ್ಲಿ ಏಳು ವರ್ಷದ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಎರಡು ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.