ಇದು ಪುಣ್ಯ ಕ್ಷೇತ್ರ ಧರ್ಮಸ್ಥಳ…

0
602

ಮಹಾಶಿವರಾತ್ರಿ ವಿಶೇಷ:
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವೂ ಒಂದು. ಶಿವರಾತ್ರಿಯಂದು ಈ ಕ್ಷೇತ್ರಕ್ಕೆ ವಿಶೇಷವಾಗಿ ಭಕ್ತರು ಆಗಮಿಸಿ ಸೇವೆಗಳನ್ನು ನೀಡುತ್ತಾರೆ. ದೂರದೂರುಗಳಿಂದ ಈ ಸಂದರ್ಭದಲ್ಲಿ ಯಾತ್ರಾರ್ಥಿಗಳಾಗಮಿಸುತ್ತಾರೆ. ಕ್ಷೇತ್ರದ ನೇತ್ರಾವತಿ ನದೀ ಸ್ನಾನ ಮುಗಿಸಿ ದೇವರ ದರ್ಶನ ಗೈದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಶಿವರಾತ್ರಿಯ ಶುಭಾವಸರದಲ್ಲಿ ಕ್ಷೇತ್ರದ ಬಗ್ಗೆ ಒಂದು ವರದಿ ನಮ್ಮ ಓದುಗರಿಗಾಗಿ…
 
 
ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ. ಶ್ರವಣ ಬೆಳಗೊಳದಂತೆ ಬಾಹುಬಲಿಯ ಪ್ರತಿಮೆ ಕೂಡ ಇರುವುದು. ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ಮಂಜುನಾಥ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದ ಶ್ರೀ ವಾದಿರಾಜರು ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ – ಸಾಂಸ್ಕೃತಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ.
 

ವಿವಿಧ ಕಡೆಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುತ್ತಿರುವ ಭಕ್ತರ ದಂಡು
ವಿವಿಧ ಕಡೆಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುತ್ತಿರುವ ಭಕ್ತರ ದಂಡು

ಈ ಕ್ಷೇತ್ರಕ್ಕೆ ಸುಮಾರು ಏಳರಿಂದ ಎಂಟುನೂರು ವರುಷಗಳ ಇತಿಹಾಸವಿದೆ. ಧರ್ಮಸ್ಥಳದ ಹಿಂದಿನ ಹೆಸರು “ಕುಡುಮ” ಎಂಬುದಾಗಿತ್ತು. ಈ ಪ್ರಾಂತ್ಯದ ನೆಲ್ಯಾಡಿ ಬೀಡು ಎಂಬ ಗೃಹದಲ್ಲಿ ಬಿರ್ಮಣ್ಣ ಪೆರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ಎಂಬ ಧರ್ಮಿಷ್ಠರಾದ ಸತಿ – ಪತಿ ವಾಸವಾಗಿದ್ದರು.
 
 
ಒಮ್ಮೆ ಇವರ ಮನೆಗೆ ನಾಲ್ಕು ಮಂದಿ ಅತಿಥಿಗಳು ಬಂದರು. ಇವರನ್ನು ನೇಮ ನಿಷ್ಠೆಯಿಂದ ಈ ದಂಪತಿಗಳು ಅತಿಥಿ ಸತ್ಕಾರ ಮಾಡಿದರು. ಅದೇ ದಿನ ರಾತ್ರಿ ಆ ನಾಲ್ವರು ಅತಿಥಿಗಳು ಧರ್ಮದೇವತೆಗಳ ರೂಪದಲ್ಲಿ ಬಿರ್ಮಣ್ಣ ಪೆರ್ಗಡೆಯವರ ಕನಸಿನಲ್ಲಿ ಕಾಣಿಸಿಕೊಂಡು, ತಾವೆಲ್ಲರೂ ಆ ಮನೆಯಲ್ಲಿ ನೆಲೆಸಲು ಇಚ್ಚಿಸಿರುವುದಾಗಿ ಹೇಳಿದರು. ಧರ್ಮದೇವತೆಗಳ ಅಣತಿಯಂತೆ ಪೆರ್ಗಡೆಯವರು ತಮ್ಮ ಮನೆ ತೆರವು ಮಾಡಿ ದೇವರುಗಳಿಗೆ ಬಿಟ್ಟು ಕೊಟ್ಟರು.. ಕಾಳರಾಹು-ಪುರುಷ ದೈವ, ಕಳರ್ಕಾಯಿ-ಸ್ತ್ರೀ ದೈವ, ಕುಮಾರಸ್ವಾಮಿ-ಪುರುಷ ದೈವ, ಹಾಗೂ ಕನ್ಯಾಕುಮಾರಿ-ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು.
 
 
ಕಾಳರಾಹು – ಪುರುಷ ದೈವ, ಕಳರ್ಕಾಯಿ – ಸ್ತ್ರೀ ದೈವ, ಕುಮಾರಸ್ವಾಮಿ – ಪುರುಷ ದೈವ, ಹಾಗೂ ಕನ್ಯಾಕುಮಾರಿ – ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು. ಆ ದೈವಗಳ ಆಜ್ಞೆಯಂತೆ ಪರ್ಗಡೆಯವರು ಗುಡಿ ಕಟ್ಟಿಸಿ ಬ್ರಾಹ್ಮಣ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಿದರು.
 
ಅರ್ಚಕರು ಇಲ್ಲಿ ಈಶ್ವರಲಿಂಗವನ್ನು ಸ್ಥಾಪಿಸುವಂತೆ ಸಲಹೆ ನೀಡಿದರು. ಧರ್ಮದೇವತೆಗಳು ಕೂಡ ಇದನ್ನೇ ಹೇಳಿ ಕದ್ರಿಯಲ್ಲಿರುವ ಮಂಜುನಾಥನ ಲಿಂಗ ತರಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು.ಕುಡುಮಕ್ಕೆ (ಧರ್ಮಸ್ಥಳ)ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.
 
 
ಕುಡುಮಕ್ಕೆ (ಧರ್ಮಸ್ಥಳ) ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.
ವೀರೇಂದ್ರ ಹೆಗ್ಗಡೆ ಅವರು ನಿಜವಾದ ನಮ್ಮ ದಕ್ಷಿಣ ಕನ್ನಡದ ದೇವರು, ಇವರ ಮಟ್ಟಿಗೆ ನಾವು ಮತ್ತೆ ನಮ್ಮ ದಕ್ಷಿಣ ಕನ್ನಡದ ಜನರು ಯಾವತ್ತಿಗೂ ಮಾತು ತಪ್ಪೊಲ್ಲ, ಇವರೇ ನಮ್ಮ ಒಡೆಯರು. ” -ಹೀಗೆಂದು ದಕ್ಷಿಣ ಕನ್ನಡದ ಹಲವು ಮಂದಿ ಹೇಳುತ್ತಿರುತ್ತಾರೆ. –

LEAVE A REPLY

Please enter your comment!
Please enter your name here