ಇಬ್ಬರು ಜಲಸಮಾಧಿ

0
377

 
ಶಿವಮೊಗ್ಗ ಪ್ರತಿನಿಧಿ ವರದಿ
ನದಿಯಲ್ಲಿ ಈಜಲು ಇಳಿದಿದ್ದ ಯುವಕರಿಬ್ಬರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರಿನ ಹೊಳೆಬಾಗಿಲು ಸಮೀಪದ ಶರಾವತಿ ನದಿಯಲ್ಲಿ ಸಂಭವಿಸಿದೆ.
 
 
 
ಯುವಕರ ಮೃತದೇಹ ನದಿಯಲ್ಲಿ ಕಣ್ಮರೆಯಾಗಿದ್ದು, ಮೃತದೇಹ ಪತ್ತೆಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಬೆಂಗಳೂರು ಮೂಲದ ಪ್ರತಾಪ್(21), ರಾಜು(21) ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ವಿಜಯನಗರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಬಿ.ಕಾಂ. ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದರು. ಇವರು ಬೆಂಗಳೂರಿನ ಲಗ್ಗೆರೆಯಲ್ಲಿ ವಾಸವಿದ್ದರು.
 
 
 
ಸಿಗಂದೂರು ಕ್ಷೇತ್ರಕ್ಕೆ 11 ಜನ ಸ್ನೇಹಿತರ ತಂಡದೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು. ಇಂದು ಬೆಳಗ್ಗೆ ನದಿಯಲ್ಲಿ ಈಜಲು ಇಳಿದಿದ್ದಾಗ ಈ ಅವಘಡ ಸಂಭವಿಸಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

LEAVE A REPLY

Please enter your comment!
Please enter your name here