ಈಶ್ವರ್ ಗೆ 'ಅಮಿತ್'ಬಲ

0
231

ರಾಷ್ಟ್ರೀಯ ಪ್ರತಿನಿಧಿ ವರದಿ
ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಪ್ರಸ್ತಾಪವಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಂತರ ಈ ವಿಚಾರ ಪ್ರಸ್ತಾಪವಾಗಿದೆ. ಬ್ರಿಗೇಡ್ ನಿಂದ ಉಂಟಾಗಿರುವ ಗೊಂದಲಗಳ ಬಗ್ಗೆ ವಿವರಣೆ ನೀಡಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರಿಂದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ವಿವರಣೆ ಸಲ್ಲಿಕೆಯಾಗಿದೆ. ಪಕ್ಷದ ಒಂದಷ್ಟು ನಾಯಕರ ಮುನಿಸಿದ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಎಲ್ಲಾ ಮಾಹಿತಿ ಪಡೆದ ಅಮಿತ್ ಶಾ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.
 
 
 
ರಾಯಣ್ಣ ಬ್ರಿಗೇಡ್ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಬೇಡ ಎಂದು ಪರೋಕ್ಷವಾಗಿ ಈಶ್ವರಪ್ಪರನ್ನು ಅಮಿತ್ ಶಾ ಬೆಂಬಲಿಸಿದ್ದಾರೆ. ಅಮಿತ್ ಶಾ ಅಭಿಪ್ರಾಯದ ಹಿನ್ನೆಲೆಯಲ್ಲಿ ಚರ್ಚಿಸಲು ಸಭೆ ಕರೆಯಲಾಗಿದೆ. ಬಿಎಸ್ ವೈ ನೇತೃತ್ವದಲ್ಲಿ ಅ.6ರಂದು ಕೋರ್ ಕಮಿಟಿ ಸಭೆ ನಡೆಯಲಿದೆ.

LEAVE A REPLY

Please enter your comment!
Please enter your name here