ಉಗ್ರರನ್ನು ಹಿಮ್ಮೆಟಿಸಿದ ಸೇನೆ

0
588

ರಾಷ್ಟ್ರೀಯ ಪ್ರತಿನಿಧಿ ವರದಿ
ಭಯೋತ್ಪಾದಕರು ಭಾರತದ ಗಡಿನುಸುಳಲು ಯತ್ನಿಸಿದ್ದಾರೆ. ಆದರೆ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನವನ್ನು ತಡೆದಿದ್ದಾರೆ. ಜಮ್ಮು-ಕಾಶ್ಮೀರದ ಹೀರಾನಗರ ಸೆಕ್ಟರ್ ನಲ್ಲಿ ಗುಂಡಿನ ದಾಳಿ ನಡೆದಿದೆ. ಉಗ್ರರು ಮತ್ತು ಸೇನಾಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಭಾರತೀಯ ಸೇನೆ ಉಗ್ರರನ್ನು ಯಶಸ್ವಿಯಾಗಿ ಹಿಮ್ಮೆಟಿಸಿದೆ.
 
 
 
ಪಾಕಿಸ್ತಾನ ಸೇನೆ ಕೂಡ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ. ಸೀಮಿತ ದಾಳಿ ಬಳಿಕ ಈ ವರೆಗೂ ಪಾಕಿಸ್ತಾನ ಸೇನೆ 31 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
 
 
 
ಇಂದು ಬೆಳಿಗ್ಗೆ 3.30ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲೂ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ.

LEAVE A REPLY

Please enter your comment!
Please enter your name here