ಉತ್ತಮ ಚರ್ಚೆ ನಡೆಸಲು ಎಲ್ಲಾ ಪಕ್ಷಗಳಿಗೆ ಮನವಿ

0
472

ವರದಿ: ಲೇಖಾ
ಮುಂಗಾರು ಅಧಿವೇಶನದ ವೇಳೆ ಸಂಸತ್ತಿನ ಎರಡೂ ಸದನಗಳಲ್ಲಿ ದೇಶಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಿದ್ದಾರೆ.
 
 
ಅಧಿವೇಶ ಆರಂಭಕ್ಕೂ ಮುನ್ನ ಸಂಸತ್ ಹೊರಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಎಲ್ಲಾ ರಾಜಕೀಯ ಪಕ್ಷಗಳ ಜೊತೆಗೂ ಮಾತನಾಡಿದ್ದೇನೆ. ಪ್ರತಿಯೊಬ್ಬರೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಳ್ಳೆಯ ಚಿತ್ತದಿಂದ ಇದ್ದಾರೆ. ಎಲ್ಲಾ ಪಕ್ಷಗಳುಚರ್ಚೆಯಲ್ಲಿ ಪಾಲ್ಗೊಳ್ಳಲು ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
 
 
ನನಗೆ ಎಲ್ಲಾ ರಾಜಕೀಯ ಪಕ್ಷಗಳ ಬಗೆಗೂ ವಿಶ್ವಾಸವಿದೆ ಎಂದ ಅವರು, 70ನೇ ಸ್ವಾತಂತ್ರ್ಯ ದಿನಾಚರಣೆಗೆ ಮೊದಲು ಈ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ದೇಶದ ಹಿತದೃಷ್ಟಿಯಿಂದ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲು, ಉತ್ತಮ ಚರ್ಚೆ ನಡೆಸಲು ಬಯಸಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here