ವಾರ್ತೆ

ಉತ್ತೇಜನಾ ತರಬೇತಿ

 
ಮ0ಗಳೂರು ಪ್ರತಿನಿಧಿ ವರದಿ
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ಸರಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉಪಗ್ರಹ ಮೂಲಕ ಪರೀಕ್ಷೆ ಬಗ್ಗೆ ಮಾರ್ಗದರ್ಶನ ಹಾಗೂ ಉತ್ತೇಜನಾ ಶಿಬಿರ ಶನಿವಾರ ನಡೆಯಿತು.
 
 
ಮೈಸೂರು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿರುವ ಸ್ಯಾಟ್‍ಕಾಂ ತರಬೇತಿ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಸ್ಯಾಟ್‍ಕಾಂ ಮೂಲಕ ಗಣಿತ, ವಿಜ್ಞಾನ, ಇಂಗ್ಲೀಷ್ ಹಾಗೂ ಸಮಾಜ ವಿಷಯಗಳ ತರಬೇತಿ ನೀಡಲಾಯಿತು.
 
 
ತರಬೇತಿ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ಪರೀಕ್ಷೆ ಎಂಬುದು ಸಹಜವಾದ ಪ್ರಕ್ರಿಯೆ ಇದರಲ್ಲಿ ಆತಂಕ ಅಗತ್ಯವಿಲ್ಲ, ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಇನ್ನೊಬ್ಬರೊಂದಿಗೆ ಹೋಲಿಕೆ ಅಗತ್ಯವಿಲ್ಲ, ಪರೀಕ್ಷಾ ಸಿದ್ದತೆಯ ಅಂತಿಮ ಘಟ್ಟದಲ್ಲಿ ಓದಿದ್ದನ್ನು ಮನನ ಮಾಡಬೇಕೇ ಹೊರತು ಹೊಸದಾಗಿ ಅಭ್ಯಾಸ ಅಗತ್ಯವಿಲ್ಲ. ಪರೀಕ್ಷೆಯಲ್ಲಿ ಸಮಯದ ಹೊಂದಾಣಿಕೆ ಮುಖ್ಯ ಎಂದರು.
 
 
ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದೇಶದ ಭವಿಷ್ಯ ಅಡಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಎದುರಿಸಿ ದೇಶದ ಸತ್ಪ್ರಜೆಗಳಾಗಬೇಕು ಎಂದು ಹೇಳಿದರು.
 
 
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೋ ಮಾತನಾಡಿ, ಈ ವರ್ಷ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆ ಪ್ರತ್ಯೇಕವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕೊನೆಯ ಹಂತದಲ್ಲಿ ಗಲಿಬಿಲಿಗೊಳ್ಳುವ ಅಗತ್ಯವಿಲ್ಲ ಎಂದರು.
 
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಉಪಸ್ಥಿತರಿದ್ದರು. ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಪ್ರಾಣೇಶ್ ರಾವ್ ಸ್ವಾಗತಿಸಿ, ರಾಜ್ಯದಲ್ಲೇ ಮೊದಲ ಬಾರಿಗೆ ಉಪಗ್ರಹ ಮೂಲಕ ಸ್ಯಾಟ್‍ಕಾಂ ಕೇಂದ್ರದಿಂದ ಎಸ್‍ಎಸ್‍ಎಲ್‍ಸಿ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.
 
 
ದ.ಕ. ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್‍ಗಳಲ್ಲಿ ಉಪಗ್ರಹ ಮೂಲಕ ತರಬೇತಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಯಾ ತಾಲೂಕು ವ್ಯಾಪ್ತಿಯ ಸಮಾಜಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುಮಾರು 557 ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.
 
 
ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕರಾದ ಸುಬ್ರಮಣ್ಯ ಶಾಸ್ತ್ರಿ-ವಿಜ್ಞಾನ, ರಘುನಾಥ ಭಟ್-ಗಣಿತ, ಮಮತಾ ಐತಾಳ್-ಸಮಾಜ ಹಾಗೂ ಸಂತೋಷ್ ಕುಮಾರ್ ಟಿ.ಎ.- ಇಂಗ್ಲೀಷ್ ವಿಷಯದಲ್ಲಿ ಮಾರ್ಗದರ್ಶನ ನೀಡಿದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.

Comment here