ಉದ್ಯಾನವನಕ್ಕೆ ಶಂಕುಸ್ಥಾಪನೆ

0
290

 
ಮ0ಗಳೂರು ಪ್ರತಿನಿಧಿ ವರದಿ
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಂದಾಜು ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಂಟ್ವಾಳ ಪುರಸಭೆಯ ವ್ಯಾಪ್ತಿಯಲ್ಲಿ ಬಿ.ಮೂಡ ಗ್ರಾಮದ ತಲಪಾಡಿ, ಮಫತ್ ಲೇಔಟ್ ನಲ್ಲಿ ಉದ್ಯಾನವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ನೆರವೇರಿಸಿದರು.
 
 
ಬಳಿಕ ಮಾತನಾಡಿದ ಸಚಿವರು, ನಗರದ ಸೌಂದರ್ಯದ ದೃಷ್ಠಿಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂಟ್ವಾಳದಲ್ಲಿ ಉದ್ಯಾನವನ ನಿರ್ಮಾಣಗೊಳ್ಳುತ್ತಿರುವುದು ಸ್ವಾಗಾತಾರ್ಹ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂಟ್ವಾಳ ತಾಲೂಕಿಗೆ ತೂಗುಸೇತುವೆ (ಬಡಗಬೆಳ್ಳೂರು-ಕುಪ್ಪೆಪದವು ಗ್ರಾಮ ಪಂಚಾಯತ್ ಗಳ ನಡುವೆ ಸಂಪರ್ಕ ಕಲ್ಪಿಸುವುದು) ಹಾಗೂ ಉದ್ಯಾನವನ ಯೋಜನೆಯನ್ನು ಒದಗಿಸಿರುವುದ ಅಭಿನಂದನಾರ್ಹ ಎಂದರು.
 
 
 
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೇದಿತ್ ಆಳ್ವ ಮಾತನಾಡಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂಟ್ವಾಳ ಪುರಸಭೆಯ ವ್ಯಾಪ್ತಿಯಲ್ಲಿ ಇಂಟರ್ಲಾಕಿಂಗ್ ಪಾಥ್ವೇ, ಮಕ್ಕಳು ಆಟವಾಡಲು ಆಧುನಿಕ ರೀತಿಯ ಅಟದ ಸಲಕರಣೆಗಳು, ಉಪಹಾರ ಮಳಿಗೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಹೂತೋಟ, ಹುಲ್ಲುಹಾಸುಗಳ ವ್ಯವಸ್ಥೆ, ಬೆಂಚ್ಗಳು, ನಿಗದಿತ ಸ್ಥಳದಲ್ಲಿ ಕಸದ ಬುಟ್ಟಿಗಳ ವ್ಯವಸ್ಥೆ ಇತ್ಯಾದಿ ಸವಲತ್ತುಗಳನ್ನು ಒಳಗೊಂಡ ಸರ್ವಋತುವಿಗೆ ಹೊಂದಿಕೊಳ್ಳುವ ಉದ್ಯಾನವ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕ್ಲಪ್ತ ಸಮಯದ ಒಳಗಡೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ತಿಳಿಸಿದರು.
 
 
 
ಮುಂದುವರೆದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ತಂದು ಹೆಚ್ಚಿನ ಅನುದಾನವನ್ನು ತರಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆಯೆಂದು ತಿಳಿಸಿದರು.
 
 
ಬಂಟ್ವಾಳ ಪುರಸಭೆಯ ಅಧ್ಯಕ್ಷರಾದ ರಾಮಕೃಷ್ಣ ಆಳ್ವ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಶಾಹುಲ್ ಹಮೀದ್, ತಾ.ಪಂ.ಸದಸ್ಯರಾದ ಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಮಹಮ್ಮದ್ ಶರೀಫ್, ವಸಂತಿ ಚಂದಪ್ಪ, ಜಗದೀಶ್ ಕುಂದರ್, ಗಂಗಾಧರ ಮಂಡಾಡಿ, ಪ್ರಭಾ ಸಾಲಿಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದಶಿಗ ಪ್ರದೀಪ್ ಡಿಸೋಜ, ಪುರಸಭಾಧಿಕಾರಿ ಸುಧಾಕರ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕಾರ ಮಂಜುನಾಥ ಶೆಟ್ಟಿ, ವಲಯಾಧಿಕಾರಿಗಳಾದ ಹರಿಹರ ವಿ ಹರಿಕಾಂತ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here