ಉಸ್ತುವಾರಿ ಸಚಿವರ ಪ್ರವಾಸ

0
425

 
ಉಡುಪಿ ಪ್ರತಿನಿಧಿ ವರದಿ
ರಾಜ್ಯ ನಗರಾಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಮಾರ್ ಸೊರಕೆ ಯವರು ಮೇ 7 ರಿಂದ ಮೇ 8 ರ ವರೆಗೆ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ಪ್ರವಾಸದ ವಿವರಗಳು ಇಂತಿವೆ.
 
 
ಮೇ 7 ರಂದು ಬೆಳಗ್ಗೆ 8 ಗಂಟೆಗೆ ಹಿರಿಯಡಕ ಶಾಸಕರ ಕಚೇರಿಯಲ್ಲಿ ನಡೆಯುವ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11 ಗಂಟೆಗೆ ಉಡುಪಿ ಅಜ್ಜರಕಾಡಿನಲ್ಲಿ ನಡೆಯುವ ನಗರ ಮತ್ತು ಕೇಂದ್ರ ಜಿಲ್ಲಾ ಗ್ರಂಥಾಲಯದ ಕಟ್ಟಡ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ಗಂಟೆಗೆ ಕಾಪು ರಾಜೀವ ಭವನದಲ್ಲಿ ನಡೆಯುವ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 7 ಗಂಟೆಗೆ ಕುಂದಾಪುರ ಫ್ರೆಂಡ್ಸ್ ಸರ್ಕಲ್ (ರಿ) ಮೀನು ಮಾರ್ಕೆಟ್ ರಸ್ತೆ-ಇದರ ಬೆಳ್ಳಿ ಹಬ್ಬದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡುವರು.
 
 
ಮೇ 8 ರಂದು ಬೆಳಗ್ಗೆ 8 ಗಂಟೆಗೆ ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯುವ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. 8.30 ಗಂಟೆಗೆ ಬೆಳಪು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಎಸ್.ಎಸ್.ಎಫ್ ಉಚ್ಚಿಲ ಸೆಕ್ಟರ್ ವತಿಯಿಂದ ನಡೆಯುವ ರಕ್ತದಾನ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 9.15 ಗಂಟೆಗೆ ಇನ್ನಂಜೆ ಬಿಲ್ಲವ ಸಂಘದ ವತಿಯಿಂದ ನಡೆಯುವ ಗುರುಮಂದಿರದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. 10.30 ಗಂಟೆಗೆ ಕಾಪುವಿನಲ್ಲಿ ನಡೆಯುವ ಉದಯ ಬಜಾರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11 ಗಂಟೆಗೆ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
 
 
 
11.30 ಗಂಟೆಗೆ ಬ್ರಹ್ಮಾವರ ಮಟಪಾಡಿಯಲ್ಲಿ ನಡೆಯುವ ಉಡುಪಿ ಜಿಲ್ಲಾ ಚಪ್ಟೇಗಾರ್ ಸಾರಸ್ವತ ಸಮಾಜ ಸುಧಾರಕ ಸಂಘದ ನೂತನ ಸಮುದಾಯ ಭವನ ಮತ್ತು ನೂತನ ಭೋಜನ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಉಳ್ಳಾಲ ಕಲ್ಲಾಪು ತೊಕ್ಕೊಟ್ಟು ಯುನಿಟಿ ಹಾಲ್ ನಲ್ಲಿ ನಡೆಯುವ ರಾಣಿ ಅಬ್ಬಕ್ಕ ಉತ್ಸವದ ಸಮಾರೋಪ ಸಮಾರಂಭ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8.30 ಗಂಟೆಗೆ ಪಂಚನಬೆಟ್ಟು ಯೂತ್ ಕ್ಲಬ್ ನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡುವರು.

LEAVE A REPLY

Please enter your comment!
Please enter your name here