ಎಂಬಿಬಿಎಸ್ ಮತ್ತು ಬಿಡಿಎಸ್ ಪರೀಕ್ಷೆ ನಡೆಸುವಂತಿಲ್ಲ

0
568

 
ನವದೆಹಲಿ ಪ್ರತಿನಿಧಿ ವರದಿ
ದೇಶಾದ್ಯಂತ ಇರುವ ಖಾಸಗಿ ವೈದ್ಯಕೀಯ ಕಾಲೇಜುಗಳು ಎಂಬಿಬಿಎಸ್ ಮತ್ತು ಬಿಡಿಎಸ್ ಪರೀಕ್ಷೆ ನಡೆಸಲು ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
 
 
ನ್ಯಾಯಮೂರ್ತಿ ಎ ಆರ್ ದಾವೆ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಅನುದಾನರಹಿತ ಖಾಸಗಿ ಕಾಲೇಜುಗಳಿಗೆ ಪರೀಕ್ಷೆ ನಡೆಸಲು ಅನುಮತಿ ಇಲ್ಲ ಎಂದು ಆದೇಶಿಸಿದೆ.
 
 
ಗುರುವಾರ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸುಗಳ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ವಿಷಯದ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಆಯಾ ರಾಜ್ಯಗಳಿಗಳಿಗೆ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಸುವ ಅವಕಾಶ ನೀಡುವುದರ ಬಗ್ಗೆ ಅಭಿಪ್ರಾಯ ತಿಳಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here