ಎರಡು ದಿನದ ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ

0
226

ನವದೆಹಲಿ/ಬೆಂಗಳೂರು ಪ್ರತಿನಿಧಿ ವರದಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಎರಡು ದಿನಗಳ ಕಾಲ ರಾಜ್ಯಕ್ಕೆ ಅಧಿಕೃತವಾಗಿ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ. ಆ.27 ಮತ್ತು ಅ.28ರಂದು ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ನಡೆಯಲಿರುವ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
 
 
ಆ.27 ರಂದು ನಡೆಯಲಿರುವ ಇಸ್ಕಾನ್ ನ ಅಕ್ಷಯ ಪಾತ್ರೆ ಯೋಜನೆಯ 15ನೇ ವರ್ಷಾಚರಣೆ ಹಾಗೂ ಆ.28 ರಂದು ನಡೆಯಲಿರುವ ನ್ಯಾಷನಲ್ ಲಾ ಸ್ಕೂಲ್ ನ ಘಟಿಕೋತ್ಸವ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಯವರು ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here