ಎಸಿಬಿ ದಾಳಿ

0
304

ಬೆಂಗಳೂರು ಪ್ರತಿನಿಧಿ ವರದಿ
ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ತುಮಕೂರು ಜಿಲ್ಲೆ, ಕಲಬುರಗಿ ಜಿಲ್ಲೆಗಳಲ್ಲಿ ಎಸಿಬಿ ದಾಳಿ ನಡೆಸಿದ್ದಾರೆ. ಆದಾಯ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
 
 
 
ಬೆಂಗಳೂರಿನ ಕೆ ಆರ್ ಸರ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಇ ಟಿ ಆರ್ ಶಿವರಾಂ ಮನೆ ಮೇಲೆ ದಾಳಿ ನಡೆದಿದೆ.
ಬಾಗಲೂರು ಪಶು ಆರೋಗ್ಯ ಅಧಿಕಾರಿ ಹೆಚ್ ಎಂ ಶಿವಪ್ರಸಾದ್ ಮನೆ ಮೇಲೆ ದಾಳಿ ನಡೆದಿದೆ. ನೆಲಮಂಗಲದಲ್ಲಿ ಶಿವಪ್ರಸಾದ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ಕಲಬುರಗಿಯಲ್ಲೂ ಜಿ.ಪಂ. ಎಂಜಿನಿಯರ್ ಶಿವಲಿಂಗಪ್ಪ ಕಲಶೆಟ್ಟಿ ನಿವಾಸ, ಕಚೇರಿ ಮೇಲೆ ದಾಳಿ ನಡೆದಿದೆ.
 
 
 
ಬೆಂಗಳೂರು ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾನಾಯ್ಕ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಭೀಮಾನಾಯ್ಕ್ ಬೆಳಗಾವಿಯ ಸದಾಶಿವನಗರದಲ್ಲಿರುವ ಬಂಗಲೆಯಲ್ಲಿ ಎಸಿಬಿ ಪರಿಶೀಲನೆ ನಡೆಸಿದೆ. ಬೃಹತ್ ಬಂಗಲೆಯನ್ನು ಭೀಮಾನಾಯ್ಕ್ ಬಾಡಿಗೆ ನೀಡಿದ್ದರು. ಎಸಿಬಿ ಅಧಿಕಾರಿಗಳು ಬಾಡಿಗೆದಾರರ ಬಗ್ಗೆ ಮಾಹಿತಿ ಪಡೆದಿದ್ದಾರೆ.

LEAVE A REPLY

Please enter your comment!
Please enter your name here