ಐ.ಸಿ.ಜೆ ತೀರ್ಪು ಭಾರತದ ಪರ- ವಿದೇಶಾಂಗ ಸಚಿವಾಲಯ

0
208

ನವದೆಹಲಿ: ಗೂಢಾಚಾರಿಕೆ ಮತ್ತು ಭಯೋತ್ಪಾದನೆಯ ಆರೋಪದ ಮೇಲೆ ಪಾಕಿಸ್ತಾನದ ಸೆರೆಯಲ್ಲಿರುವ ಭಾರತೀಯ ನೌಕಾಪಡೆಯ ನಿವೃತ್ತ ಯೋಧ ಕುಲಭೂಷನ್‌ ಜಾಧವ್‌ ಪ್ರಕರಣದ ಸಂಬಂಧ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿದ ತೀರ್ಪು ಭಾರತದ ಪರವಾಗಿದೆ ಹಾಗೂ ಅದರಲ್ಲಿ ಯಾವುದೇ ಗೊಂದಲವಿಲ್ಲ ಎಂಬುದಾಗಿ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.
ಪಾಕಿಸ್ತಾನ ತೀರ್ಪನ್ನು ಬೇರೆಯೇ ರೀತಿ ಬಿಂಬಿಸುತ್ತಿದೆ ಎಂದಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ಪಾಕಿಸ್ತಾನಕ್ಕೆ 42ನೇ ಪುಟವನ್ನು ಹುಡುಕಿ ಓದುವ ತಾಳ್ಮೆಯಿರದಿದ್ದರೆ ಅವರು 7ಪುಟಗಳ ಪತ್ರಿಕಾ ಪ್ರಕಟಣೆಯನ್ನು ಓದಲಿ. ಅದರಲ್ಲಿ ಪ್ರತಿಯೊಂದು ವಾಕ್ಯವೂ ಭಾರತದ ಪರವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ನ್ಯಾಯಾಲಯದ ತೀರ್ಪು ಭಾರತದ ನಿಲುವನ್ನು ಸಮರ್ಥಿಸಿದೆ ಎಂದ ಅವರು ಪಾಕಿಸ್ತಾನಕ್ಕೆ ವಿಯೆನ್ನಾ ಒಪ್ಪಂದದ ಅನುಸಾರ ನಡೆದುಕೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದೆ ಎಂದರು.

LEAVE A REPLY

Please enter your comment!
Please enter your name here