ಒಳಗೊಳ್ಳುವ ಅಭಿವೃದ್ದಿಯ ತಂತ್ರಗಳು ಪುಸ್ತಕ ಬಿಡುಗಡೆ

0
333
????????????????????????????????????

ಉಜಿರೆ ಪ್ರತಿನಿಧಿ ವರದಿ
ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ.ಎ.ಜಯ ಕುಮಾರ ಶೆಟ್ಟಿ ಹಾಗೂ ಗಣರಾಜ್ ಸಂಪಾದಿಸಿದ ಸಂಶೋಧನಾ ಲೇಖನಗಳನ್ನು ಒಳಗೊಂಡ ಒಳಗೊಳ್ಳುವ ಅಭಿವೃದ್ದಿಯ ತಂತ್ರಗಳು ಹಾಗೂ ಸವಾಲುಗಳು ಪರಾಮರ್ಶನ ಗ್ರಂಥವನ್ನು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಹಾಗೂ ಕರ್ನಾಟಕ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಜಿ.ವಿ.ಜೋಷಿ ಅವರು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ಒಕ್ಕೂಟದ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.
 
 
 
ವೇದಿಕೆಯಲ್ಲಿ ದ.ಕ.ಜಿಲ್ಲಾ ಪಂಚಾಯತ್ನ ಮಾಜಿ ಅಧ್ಯಕ್ಷ ಸುಚರಿತ ಶೆಟ್ಟಿ, ಡಾ.ಎ.ಜಯಕುಮಾರ ಶೆಟ್ಟಿ, ಶ್ರೀ ಮಹಾವೀರ ಕಾಲೇಜಿನ ಉಪ ಪ್ರಾಚಾರ್ಯ ಡಾ.ವಾಮನ ಬಾಳಿಗಾ, ಮಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷ ಕೆ.ಚಂದ್ರ ಹಾಗೂ ಕಾರ್ಯದರ್ಶಿ ರಾಧಾಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here