ಒಳನಾಡು ಮೀನುಗಾರಿಕೆ ಹೆಚ್ಚು ಬಳಕೆ ಅಗತ್ಯ : ಮಧ್ವರಾಜ್

0
224

 
ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯದಲ್ಲಿ ಒಳನಾಡು ಮೀನುಗಾರಿಕೆಗೆ ಹೆಚ್ಚು ಅವಕಾಶವಿದೆ. ಅದನ್ನು ಈವರೆಗೂ ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಯುವಜನ, ಕ್ರೀಡೆ ಹಾಗೂ ಮೀನುಗಾರಿಕೆ ಖಾತೆ ರಾಜ್ಯ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
 
 
 
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ ಒಳನಾಡು ಮೀನುಗಾರಿಕೆ ಹೆಚ್ಚು ಒತ್ತು ನೀಡುವುದರಿಂದ ಉದ್ಯೋಗ, ಸೃಷ್ಠಿ, ಉತ್ತಮ ಪೌಷ್ಠಿಕ ಆಹಾರ ಸಿಗುವುದರ ಜೊತೆಗೆ ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತದೆ ಎಂದರು.
 
 
 
ಮೀನುಗಾರಿಕೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ಕರಾವಳಿ ರಾಜ್ಯಗಳು ಏಕರೂಪದ ಕಾನೂನು ರೂಪಿಸುವುದು ಅಗತ್ಯ ಇದೆ. ಈ ಸಂಬಂಧ ಕರಾವಳಿ ರಾಜ್ಯಗಳ ಮೀನುಗಾರಿಕೆ ಸಚಿವರುಗಳ ಸಭೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲು ಚಿಂತಿಸಲಾಗಿದೆ. ಸುಸ್ಥಿರ ಮೀನುಗಾರಿಕೆಗೂ ನಾವು ಇನ್ನು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.
 
 
ಆರ್ಥಿಕ ಸಮಸ್ಯೆಯಿಂದ ಬಳಲುವ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಉತ್ತಮ ಆಹಾರ ಹಾಗೂ ತರಬೇತಿ ನೀಡಿದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳಾಗಿ ಹೊರ ಹೊಮ್ಮಲಿದ್ದಾರೆ ಎಂದ ಸಚಿವರು ರಾಜ್ಯದಲ್ಲಿರುವ ಶೇ 60 ರಷ್ಟು ಯುವಕರನ್ನು ಸಾಮಾಜಿಕ ಪಿಡುಗುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಹಾಗೂ ದೇಶಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ದೇಶದ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here