ಕಟೀಲ್ ವಿರುದ್ಧ ಕೇಸ್ ದಾಖಲೆ

0
215

ಮಂಗಳೂರು ಪ್ರತಿನಿಧಿ ವರದಿ
ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಾಗಿದೆ. ಕಟೀಲ್ ವಿವಾದಿತ ಹೇಳಿಕೆಗೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
 
 
ಯೂಥ್ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಘಟಕದಿಂದ ದೂರು ದಾಖಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ನಿಂದ ದೂರು ದಾಖಲಾಗಿದೆ. ಕಟೀಲ್ ಅವರು ಹೇಳಿಕೆಯಿಂದ ಜಿಲ್ಲೆಯಲ್ಲಿ ಶಾಂಇ ಸುವ್ಯವಸ್ಥೆಗೆ ಧಕ್ಕೆ ಸಾಧ್ಯತೆ ಇದೆ. ನಳಿನ್ ಕುಮಾರ್ ಕಟೀಲ್ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಹೇರಿದ್ದಾರೆ.
 
 
ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳನ್ನು ಬಂಧಿಸದೇ ಇದ್ದರೆ ದಕ್ಷಿಣಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ಸಿದ್ಧ’ ಎಂದು ನಿನ್ನೆ ಕೊಣಾಜೆ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ ಸಂಸದ ಕಟೀಲ್ ಹೇಳಿಕೆ ನೀಡಿದ್ದರು.

LEAVE A REPLY

Please enter your comment!
Please enter your name here