ಕಡ್ಡಾಯವಾಗಿ ಕ್ಯಾಮರಾ ಅಳವಡಿಸಲು ಸೂಚನೆ

0
370

ಉಜಿರೆ ಪ್ರತಿನಿಧಿ ವರದಿ
ಪೇಯಿಂಗ್ ಗೆಸ್ಟ್ ವಿದ್ಯಾರ್ಥಿ ವಸತಿನಿಲಯಗಳಲ್ಲಿ ಕಡ್ಡಾಯವಾಗಿ ಕ್ಯಾಮರಾ ಅಳವಡಿಸಬೇಕು ಎಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನೇಮಿರಾಜ್ ಸೂಚಿಸಿದರು.
 
 
ಎಸ್.ಡಿ.ಎಂ ಸ್ವಾಯತ್ತ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯು ಆಯೋಜಿಸಿದ್ದ ಪೇಯಿಂಗ್ ಗೆಸ್ಟ್ ವಿದ್ಯಾರ್ಥಿ ನಿಲಯಗಳ ಮಾಲಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
 
ಕ್ಯಾಮರಾಗಳನ್ನು ಅಳವಡಿಸುವುದರಿಂದ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಚಲನವಲನಗಳ ಮೇಲೆ ನಿಗಾ ಇರಿಸಲು ಸಾಧ್ಯವಾಗುತ್ತದೆ. ಅವರು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
 
 
ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಅಧ್ಯಯನಕ್ಕೆ ಪೂರಕ ವಾತಾವರಣವನ್ನು ವಿದ್ಯಾರ್ಥಿ ನಿಲಯಗಳ ಮಾಲಕರು ಕಲ್ಪಿಸಿಕೊಡಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
 
 
ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ.ಎಸ್ ಮೋಹನನಾರಾಯಣ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪೇಯಿಂಗ್ ಗೆಸ್ಟ್ ವಸತಿ ನಿಲಯಗಳಲ್ಲಿ ಶಿಸ್ತನ್ನು ಪಾಲಿಸುವಂತಹ ನಿಯಮಾವಳಿಗಳನ್ನು ಜಾರಿಗೊಳಿಸಬೇಕು ಎಂದು ಸೂಚಿಸಿದರು.
 
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ| ರಾಧಾಕೃಷ್ಣ ಮಯ್ಯ ಮಾತನಾಡಿದರು. ಮೆಸ್ ಮಾಲಕರ ಸಮಿತಿ ವ್ಯವಸ್ಥಾಪಕ ರಾಕೇಶ್ ಟಿ .ಎಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here