ರಾಯಚೂರು ಪ್ರತಿನಿಧಿ ವರದಿ
ಇಂದಿನಿಂದ (ಶುಕ್ರವಾರ) 82ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗುತ್ತದೆ. ಬಿಸಿಲನಾಡು ರಾಯಚೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರಕಿದೆ. ರಾಷ್ಟ್ರಧ್ವಜಾರೋಹಣದ ಮೂಲಕ 82ನೇ ಅಖಿಲ ಭಾರತ ಕನ್ನಡ ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಚಾಲನೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮನು ಬಳಿಗಾರ್ ಧ್ವಜಾರೋಹಣ ಮಾಡಿದ್ದಾರೆ.