ಕರಕುಶಲ ತಯಾರಿಕಾ ತರಬೇತಿಗೆ ಚಾಲನೆ

0
146

 
ಮ0ಗಳೂರು ಪ್ರತಿನಿಧಿ ವರದಿ
ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇವರ ವತಿಯಿಂದ ಕೊರಗ, ಸಿದ್ಧಿ, ಬುಡಕಟ್ಟು ಸಮುದಾಯದವರಿಗೆ ಬಿದಿರಿನ ಕರಕುಶಲ ವಸ್ತುಗಳ ತಯಾರಿಕಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಶನಿವಾರ ಪಿಲಿಕುಲ ನಿಸರ್ಗಧಾಮದಲ್ಲಿ ನಡೆಯಿತು.
 
 
ಕಾರ್ಯಕ್ರಮದ ಉದ್ಘಾಟನೆಯನ್ನು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಜಯಪ್ರಕಾಶ್ ಭಂಡಾರಿ ಇವರು ನೆರವೇರಿಸಿ, ಬಿದಿರಿನ ಉತ್ಪನ್ನಗಳ ಕುರಿತ ಮಾಹಿತಿ ಹಾಗೂ ಮಹತ್ವವನ್ನು ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇದರ ನಿರ್ದೇಶಕರಾದ ಪ್ರೊ. ಟಿ.ಟಿ ಬಸವನಗೌಡ ಇವರು ವಹಿಸಿದ್ದರು.
 
 
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಡಾ. ಬಿ.ಎಸ್ ಹೇಮಲತಾ ಮಾತನಾಡಿ, ಈ ತರಬೇತಿ ಕಾರ್ಯಕ್ರಮವು 15 ದಿನಗಳ ಕಾರ್ಯಕ್ರಮವಾಗಿದ್ದು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದರು.
 
 
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯದ ಪ್ರಾದೇಶಿಕ ವಿನ್ಯಾಸ ಮತ್ತು ತಾಂತ್ರಿಕ ಅಭಿವೃದ್ಧಿ ಕೇಂದ್ರ ಬೆಂಗಳೂರು ಇಲ್ಲಿನ ಕೆ.ಎಂ. ಚಲಪತಿ ಹಾಗೂ ಚಾಮರಾಜನಗರ ಜಿಲ್ಲೆಯ ಆರ್. ಚಿಕ್ಕಸಿದ್ದಯ್ಯ ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಪಿಲಿಕುಳ ನಿಸರ್ಗಧಾಮದ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕೊರಗ ಸಮುದಾಯದ ಮುಖಂಡರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here