ಕರಾಳ ದಿನಕ್ಕೆ 8 ವರ್ಷ

0
548

ರಾಷ್ಟ್ರೀಯ ಪ್ರತಿನಿಧಿ ವರದಿ
26/11ರ ಮುಂಬೈ ದಾಳಿಯ ಕರಾಳ ದಿನಕ್ಕೆ ಇಂದು 8 ವರ್ಷವಾಗಿದೆ. ಈಗಲೂ ಆ ಕರಾಳ ದಿನ ಬೆಚ್ಚಿಬೀಳಿಸುತ್ತದೆ. ಘಟನೆಯಲ್ಲಿ 166 ಜನರು ಮೃತಪಟ್ಟಿದ್ದು, 308 ಜನರು ಗಾಯಗೊಂಡಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು.
 
 
 
ಇಂದು ದೇಶದೆಲ್ಲೆಡೆ ಮುಂಬೈ ದಾಳಿಯಲ್ಲಿ ದೇಶಕ್ಕಾಗಿ ಪ್ರಾಣ ತೆತ್ತ ಯೋಧರಿಗೆ ಗೌರವ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೈದ್ರಾಬಾದ್ ನಲ್ಲಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
 
 
26/11/2008ರಂದು ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್, ಛತ್ರಪತಿ ಶಿವಾಜಿ ಟರ್ಮಿನಸ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿದ್ದರು.
 
 
 
68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಎನ್‌ಕೌಂಟರ‍್ ಸ್ಪೆಷಲಿಸ್ಟ್‌ ವಿಜಯ್‌ ಸಲಾಸ್ಕರ್‌, ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ, ಅಶೋಕ್ ಕಾಮ್ಟೆ, ತುಕಾರಾಂ ಒಂಬಳೆ, ಗಜೇಂದರ್ ಸಿಂಗ್ ಹಾಗೂ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ ಕಮಾಂಡೋ ಆಗಿದ್ದ ಸಂದೀಪ್ ಉನ್ನಿಕೃಷ್ಣನ್ ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಉಗ್ರರನ್ನು ಸದೆಬಡಿದಿದ್ದರು.

LEAVE A REPLY

Please enter your comment!
Please enter your name here