ಕರ್ನಾಟಕಕ್ಕೆ ಭಾರೀ ಮಳೆಯ ನಿರೀಕ್ಷೆ

0
170

ನಮ್ಮ ಪ್ರತಿನಿಧಿ ವರದಿ
ಮುಂದಿನ 24ಗಂಟೆಗಳಲ್ಲಿ ರಾಜ್ಯದಲ್ಲಿ ತೀವ್ರ ಮಳೆ-ಗಾಳಿಯಾಗುವ ಸಂಭವವಿದೆ. ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವುದೇ ಇದಕ್ಕೆ ಕಾರಣ. ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ದಟ್ಟವಾಗಿದೆ. ಇದರಿಂದಾಗಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಂಭವವಿದೆ. ಬಂಗಾಳಕೊಲ್ಲಿಯ ನೈಋತ್ಯದಲ್ಲಿ ಉಂಟಾದ ವಾಯುಭಾರ ಕುಸಿತ ಇದೀಗ ನೈಋತ್ಯದಿಂದ ಈಶಾನ್ಯದತ್ತ ಮುಖಮಾಡಿದ್ದೂ ಅಲ್ಲದೆ ತೀವ್ರ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗಿದೆ. ಇದರಿಂದಾಗಿ ಕರಾವಳಿಯಾದ್ಯಂತ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here