ಕಲಾಪದಲ್ಲಿ ಬಿಜೆಪಿ ಪ್ರತಿಭಟನೆ

0
287

ಬೆಳಗಾವಿ ಪ್ರತಿನಿಧಿ ವರದಿ
ಬೆಳಗಾವಿ ಜಿಲ್ಲೆಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಕಲಾಪದ ಆರಂಭದಲ್ಲೇ ಸದನದಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆ ನಡೆದಿದೆ. ವಿಧಾನಸಭೆ ಕಲಾಪ ಆರಂಭವಾಗುತ್ತದ್ದಂತೆ ಬಿಜೆಪಿ ಗದ್ದಲ ನಡೆಸಿದೆ. ಪ್ರತಿಭಟನೆಗೆ ಮುಂದಾಗಿದ್ದ ರೈತರ ಬಂಧನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಸನದ ಬಾವಿಗಿಳಿದು ಧರಣಿ ನಡೆಸಿದ್ದಾರೆ.
 
 
ಪ್ರತಿಭಟನಾ ನಿರತ ರೈತರನ್ನು ಬಂಧಿಸಿದ್ದು ಖಂಡನೀಯವಾಗಿದೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
 
 
‘ರೈತರನ್ನು ವಶಕ್ಕೆ ಪಡೆಯಲು ರೈತರೇನು ಗೂಂಡಾಗಳಾ’ ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದ ರೈತರನ್ನು ಬಿಡುಗಡೆ ಮಾಡಿದ್ದೀವಿ ಎಂದು ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 
 
 
ರೈತರು ದೇಶದ್ರೋಹ ಕೆಲಸ ಮಾಡಿದ್ದಾರಾ? ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ರಾಜ್ಯಕ್ಕೆ ಅನ್ನ ಕೊಡುವ ರೈತರನ್ನು ಬಂಧಿಸಿದ್ದು ಸರಿಯಲ್ಲ ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಗೋವಿಂದ ಕಾರಜೋಳ ನೇರ ಪ್ರಶ್ನೆ ಹಾಕಿದ್ದಾರೆ. ಎಲ್ಲರನ್ನೂ ಬಿಡುಗಡೆ ಮಾಡಲು ಬೆಳಗ್ಗೆ 9.30ಕ್ಕೇ ಆದೇಶ ನೀಡಲಾಗಿದೆ ಸಿಎಂ ಸಿದ್ದರಾಮಯ್ಯ ಕಾರಜೋಳ ಪ್ರಸ್ತಾಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಜನರಿಗೆ ತೊಂದರೆಯಾಗಬಾರದೆಂದು ಹಲವರು ವಶಕ್ಕೆ ಪಡೆಯಲಾಗಿದೆ.
 
 
ಆಡಳಿತ, ವಿಪಕ್ಷಸದಸ್ಯರ ವಾಗ್ವಾದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ.
ಬೆಳಗ್ಗೆ 10 ಗಂಟೆ ನಂತರ ಅಧಿವೇಶನ ಶುರುವಾಗಿದ್ದು, ಮೊದಲ ದಿನವೇ ಕ್ಷಾಮದ ಬಗ್ಗೆ ಚರ್ಚಿಸಲು ಕೋರಿ ನಿಲುವಳಿ ಮಂಡನೆ ಮಾಡಲು ವಿಪಕ್ಷ ಬಿಜೆಪಿ ಸಿದ್ಧತೆ ಮಾಡ್ಕೊಂಡಿತ್ತು. ನಡುವೆ ರೈತರ ಸಾಲ ಮನ್ನಾ, ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿತ್ತು.

LEAVE A REPLY

Please enter your comment!
Please enter your name here