ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ರಾಜ್ ಬಬ್ಬರ್ ನೇಮಕ

0
498

ವರದಿ: ಲೇಖಾ
ನಟ, ಮಾಜಿ ಸಂಸದ ರಾಜ್‌ ಬಬ್ಬರ್‌ ಅವರಿಗೆ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ಪಕ್ಷದಲ್ಲಿ ಮಹತ್ವದ ಹುದ್ದೆ ನೀಡುವ ನಿರೀಕ್ಷೆ ಹುಸಿಯಾಗಿದೆ.
 
 
ಉತ್ತರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿರ್ಮಲ್ ಖತ್ರಿ ರಾಜೀನಾಮೆ ನೀಡಿದ್ದು, ರಾಜ್ ಬಬ್ಬರ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಕ್ರಮ ಮಹತ್ವದ್ದಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
 
ಉತ್ತರ ಪ್ರದೇಶ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಗುಲಾಮ್‌ ನಬಿ ಆಜಾದ್‌ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿದ್ದರು. ಅಲ್ಲದೇ, ಚುನಾವಣಾ ತಂತ್ರಗಳ ಕುರಿತಂತೆ ಸೋನಿಯಾ ಅವರ 10 ಜನಪಥ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದರು. ಪ್ರಿಯಾಂಕಾ ಜತೆ ಗುಲಾಂ ನಬಿ ಆಜಾದ್ ಮಾತುಕತೆ ನಡೆಸಿ ಈ ತೀರ್ವನ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
 
 
ಚುನಾವಣಾ ಪ್ರಚಾರಾಂದೋಲನ ಆರಂಭವಾದ ನಂತರ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೊಷಿಸಲಾಗುವುದು ಎಂದು ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here