ಕಾಂಗ್ರೆಸ್ ನಿಂದ ಗೇಟ್ ಪಾಸ್

0
357

 
ಬೆಂಗಳೂರು ಪ್ರತಿನಿಧಿ ವರದಿ
ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಸಿಎಂ ಸಿದ್ದರಾಮಯ್ಯರ ಆಪ್ತ ಕೆ.ಮರಿಗೌಡನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧಿಕೃತ ಆದೇಶ ಹೊರಡಿಸಿದೆ.
 
 
ಮೈಸೂರು ಜಿಲ್ಲಾಧಿಖಾರಿ ಡಿಸಿ ಸಿ.ಶಿಖಾಗೆ ಧಮ್ಕಿ, ಕರ್ತವ್ಯಕ್ಕೆ ಅಡ್ಡಿ ಪ್ರಕರಣದ ಸಂಬಂಧ ಮರಿಗೌಡ ಬಂಧಿತನಾಗಿದ್ದಾನೆ. ಹೀಗಾಗಿ ಪಕ್ಷದಿಂದ ಅಮಾನತುಗೊಳಿಸುವಂತೆ ಕೆಪಿಸಿಸಿಯು ಆದೇಶಿಸಿದೆ.
 
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಎದುರಿಸುತ್ತಿರುವ ಕೆ.ಮರೀಗೌಡ ಅವರು ಆಗಸ್ಟ್ 3ರಂದು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಕೋರ್ಟ್ ಅವರನ್ನು ಆಗಸ್ಟ್ 16ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
 
 
ಸದ್ಯ ಮರಿಗೌಡ ಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಜೈಲಿನಲ್ಲಿರುವ ಮರೀಗೌಡ ಅವರು ಮೈಸೂರು ಜೆಎಂಎಫ್‌ಸಿ ಕೋರ್ಟ್‌ಗೆ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ವಜಾಗೊಳಿಸಿತ್ತು.

LEAVE A REPLY

Please enter your comment!
Please enter your name here