ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್

0
348

ಬೆಳಗಾವಿ ಪ್ರತಿನಿಧಿ ವರದಿ
ಇಂದು ಕುಂದಾನಗರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಅಖಿಲ ಭಾರತ ಕಾಂಗ್ರೆಸ್ ಉಪಾಧ್ಯಕ್ಷ (ಎಐಸಿಸಿ)ರಾಹುಲ್ ಗಾಂಧಿ ಆಗಮಿಸಲಿದ್ದಾರೆ.
 
 
 
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಇಂದು ಮಧ್ಯಾಹ್ನ 2.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಹುಲ್‌ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕ್ರೀಡಾಂಗಣ ತಲುಪಲಿದ್ದಾರೆ. ನಂತರ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
 
 
 
ಸಮಾವೇಶದಲ್ಲಿ ರಾಜ್ಯ ಪ್ರಧಾನ ಉಸ್ತುವಾರಿ ದಿಗ್ವಿಜಯ ಸಿಂಗ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್‌, ಆಸ್ಕರ್‌ ಫರ್ನಾಂಡಿಸ್, ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಮುಖಂಡರಾದ ವೀರಪ್ಪ ಮೊಯ್ಲಿ ಸೇರಿದಂತೆ ಪಕ್ಷದ ಮುಖಂಡರು, ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.
 
 
ಕ್ರೀಡಾಂಗಣದಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.

LEAVE A REPLY

Please enter your comment!
Please enter your name here