ಕಾಬೂಲ್ ದಾಳಿ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

0
273

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಅಫ್ಘಾನಿಸ್ಥಾನದ ಕಾಬುಲ್ ನಲ್ಲಿರುವ ಅಮೆರಿಕನ್ ವಿಶ್ವವಿದ್ಯಾನಿಲಯದ ಮೇಲೆ ಭಯೋತ್ಪಾದಕ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಪೊಲೀಸರು, ಇಬ್ಬರು ಭದ್ರತಾ ಸಿಬ್ಬಂಧಿಗಳು ಸೇರಿ ಒಟ್ಟು 12 ಜನರು ಸಾವನ್ನಪ್ಪಿದ್ದಾರೆ ಎಂದು ಕಾಬುಲ್ ಪೊಲೀಸ್ ಇಲಾಖೆಯ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
 
ದಾಳಿಯಲ್ಲಿ ಒಟ್ಟು 35 ವಿದ್ಯಾರ್ಥಿಗಳು, 9 ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದು ಒಟ್ಟು 750 ವಿದ್ಯಾರ್ಥಿಗಳನ್ನು ಹಾಗೂ ಬೋಧಕ ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ.
 
 
ಬಂದೂಕು ಹಾಗೂ ಸ್ಫೋಟಕಗಳಿಂದ ಅಮೆರಿಕನ್ ವಿವಿ ಕ್ಯಾಂಪಸ್ ಮೇಲೆ ದಾಳಿ ನಡೆಸಿದವರ ಪೈಕಿ ಇಬ್ಬರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ದಾಳಿಯ ಬಗ್ಗೆ ಈ ವರೆಗೂ ಯಾವುದೇ ಸಂಘಟನೆಗಳು ಹೊಣೆ ಹೊತ್ತಿಲ್ಲ. ಕಾಬುಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

LEAVE A REPLY

Please enter your comment!
Please enter your name here