ಕಾಬೂಲ್ ನಲ್ಲಿ ಆತ್ಮಹತ್ಯಾ ದಾಳಿ

0
205

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ ಸಂಭವಿಸಿದೆ. ರಾಜಧಾನಿ ಕಾಬೂಲ್‌ನ ಪಶ್ಚಿಮ ಭಾಗದಲ್ಲಿ ಬುಧವಾರ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ.
 
 
ಬಾಂಬ್ ದಾಳಿಯಲ್ಲಿ 10 ಮಂದಿ ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ.ಸ್ಥಳೀಯ ನ್ಯಾಯಾಲಯದ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಈ ದಾಳಿ ನಡೆದಿದೆ.
 
 
ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟಿರುವುದನ್ನು ಆಫ್ಘಾನಿಸ್ತಾನದ ಆಂತರಿಕ ಸಚಿವಾಲಯ ಸ್ಪಷ್ಟಪಡಿಸಿದೆ. ಯಾವ ಭಯೋತ್ಪಾದನಾ ಸಂಘಟನೆಯೂ ಈವರೆಗೆ ದಾಳಿಯ ಹೊಣೆ ಹೊತ್ತಿಲ್ಲ.

LEAVE A REPLY

Please enter your comment!
Please enter your name here