ಕಾರು ಪಲ್ಟಿ- ಮೂರು ಸಾವು

0
433

ಮೈಸೂರು ಪ್ರತಿನಿಧಿ ವರದಿ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ರಂಗನಾಥಪುರ ಗ್ರಾಮದ ಬಳಿ ಸಂಭವಿಸಿದೆ.
 
 
 
ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಅಜಿತ್(22), ಮೈಸೂರು ಜಿಲ್ಲೆ ಪಿರಿಯಾಪಟ್ಟಣ ನಿವಾಸಿ ಪುನಿತ್(25), ಮೈಸೂರಿನ ಕುವೆಂಪುನಗರದ ತೇಜಸ್ (23) ದುರ್ಮರಣ ಹೊಂದಿದ್ದ ದುರ್ದೈವಿಗಳಾಗಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here