ಕಾರ್ಯಕ್ರಮಕ್ಕೆ ಶ್ರೀಗಳ ಬೆಂಬಲ

0
354

 
ವರದಿ-ಚಿತ್ರ: ಶ್ಯಾಮ್ ಪ್ರಸಾದ್, ಬದಿಯಡ್ಕ
ಡಿಸೆಂಬರ್ 9 ರಿಂದ 13 ರ ತನಕ ಬದಿಯಡ್ಕದಲ್ಲಿ ಜರಗಲಿರುವ ವಿಶ್ವ ತುಳುವೆರೆ ಆಯನೊ ಕಾರ್ಯಕ್ರಮಕ್ಕೆ ಶ್ರೀಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
 
 
 
ತುಳುವೆರೆ ಆಯನೊ ಕೂಟದ ಸದಸ್ಯರು ಶ್ರೀ ಧಾಮಕ್ಕೆ ಭೇಟಿಯಿತ್ತು ಪೂಜ್ಯ ಸ್ವಾಮೀಜಿಯವರಲ್ಲಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಸ್ವಾಮೀಜಿಯವರು ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿ ತುಳುನಾಡು ನುಡಿಯ ಅಭಿವೃದ್ಧಿಗಾಗಿ ನಡೆಯುತ್ತಿರುವ ಜಾಗತಿಕ ಮಟ್ಟದ ಉತ್ಸವವು ಯಶಸ್ವಿಯಾಗಲಿ ಎಂದು ಹಾರೈಸಿದರು.
 
 
 
ಈ ಸಂದರ್ಭದಲ್ಲಿ ಪ್ರೊ. ಶ್ರೀನಾಥ್ ಕಾಸರಗೋಡು, ಡಾ. ರಾಜೇಶ್ ಆಳ್ವ ಬದಿಯಡ್ಕ, ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲ್, ನಿರಂಜನ ರೈ ಪೆರಡಾಲ, ಹರ್ಷ ರೈ ಪುತ್ರಕಳ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here