ಕಾವೇರಿ ವಿವಾದ: ಮಾ.21ಕ್ಕೆ ಮುಂದೂಡಿಕೆ

0
583

ರಾಷ್ಟ್ರೀಯ ಪ್ರತಿನಿಧಿ ವರದಿ
ಕಾವೇರಿ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಸುಪ್ರೀಂಕೋರ್ಟ್ ಮಾರ್ಚ್ 21ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಮಾರ್ಚ್ 21ರಿಂದ ಏಪ್ರಿಲ್ 11ರವರೆಗೆ ಅರ್ಜಿಗಳ ವಿಚಾರಣೆ ನಡೆಯಲಿದೆ.
ಈ ಸಂದರ್ಭದಲ್ಲಿ ಯಾವುದೇ ರಾಜ್ಯಗಳು ಮಧ್ಯಂತರ ಅರ್ಜಿ ಸಲ್ಲಿಸಬಾರದು ಎಂದು ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠದ ಕೋರ್ಟ್ ಸೂಚಿಸಿದೆ.
 
 
 
ಇಂದು ಕಾವೇರಿ ನದಿ ನೀರು ವಿವಾದ ಮೇಲ್ಮನವಿ ಅರ್ಜಿ ವಿಚಾರಣೆಯಿತ್ತು. ಕಾವೇರಿ ಜಲವಿವಾದ ನ್ಯಾಯಮಂಡಳಿ 2007ರಲ್ಲಿ ನೀಡಿದ್ದ ಐ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿತ್ತು. ಈ ಬಗ್ಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸರ್ಕಾರಗಳು ಅರ್ಜಿ ಸಲ್ಲಿಸಿತ್ತು. ಮೂರು ರಾಜ್ಯಗಳ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.

LEAVE A REPLY

Please enter your comment!
Please enter your name here