ಕಾಶ್ಮೀರದಲ್ಲಿ ಗಲಭೆ ಹಿನ್ನಲೆ: ಪ್ರಧಾನಿ ನೇತೃತ್ವದಲ್ಲಿ ನಡೆದ ಸಭೆ ಅಂತ್ಯ

0
180

 
ವರದಿ: ಲೇಖಾ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
 
 
ಬುರ್ಹಾನ್ ವಲಿ ಹತ್ಯೆಯ ಬಳಿಕ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸೆಗೆ 30 ಜನ ಸಾವನ್ನಪ್ಪಿದ್ದು, ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
 
 
ನವದೆಹಲಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನ ಮಂತ್ರಿಯವರ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಕಣಿವೆಯ ಪರಿಸ್ಥಿತಿಯ ಆವಲೋಕನ ನಡೆಸಿದ್ದಾರೆ. ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪ್ರಧಾನಿ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಮುಗ್ಧ ಜನರ ಬದುಕಿಗೆ ತೊಂದರೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಪರಿಸ್ಥಿತಿ ನಿಭಾಯಿಸುವ ಸಂಬಂಧ ಮಾರ್ಗದರ್ಶನ ನೀದಿದರು ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here